ನಿತ್ಯ ನೀತಿ : ಯಾರು ತನ್ನ ಸುಖವನ್ನು ಸಮಾಜಕ್ಕಾಗಿ ತ್ಯಾಗ ಮಾಡುವುದಕ್ಕೆ ಮುಂದಾಗುತ್ತಾರೋ ಅವರಿಗೆ ಸಮಾಜವನ್ನು ಉದ್ಧರಿಸುವಂತಹ ಕೆಲಸಗಳು ಅವರ ಕಣ್ಮುಂದೆ ಹೊಳೆಯುವುದಕ್ಕೆ ಆರಂಭಿಸುತ್ತವೆ.
ಪಂಚಾಂಗ ಭಾನುವಾರ 08-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪುಷ್ಯ / ಯೋಗ: ಸಿದ್ಧ / ಕರಣ: ವಣಿಜ್
ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.05
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30
ರಾಶಿ ಭವಿಷ್ಯ
ಮೇಷ: ವ್ಯಾಪಾರ ಕ್ಷೇತ್ರದಲ್ಲಿ ಲಾಭವಾಗಲಿದೆ. ಅಗತ್ಯ ವಸ್ತುಗಳನ್ನು ಖರೀದಿಸುವಿರಿ.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾಗಬಹುದು.
ಮಿಥುನ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಮನೆಯಲ್ಲಿ ಶಾಂತಿಯುತ ವಾತಾವರಣ.
ಕಟಕ: ದಾಯಾದಿ ಕಲಹ. ದುಷ್ಟ ಜನರಿಂದ ದೂರವಿರಿ.
ಸಿಂಹ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಕನ್ಯಾ: ಹಣದ ಒಳಹರಿವು ಉತ್ತಮವಾಗಿರುತ್ತದೆ.
ತುಲಾ: ಹಿತಶತ್ರುಗಳಿಂದ ತೊಂದರೆ. ಊರೂರು ಸುತ್ತಾಟ. ಮನಸ್ಸಿನಲ್ಲಿ ಭೀತಿ.
ವೃಶ್ಚಿಕ: ಬೆನ್ನು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ನೀವು ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.
ಧನುಸ್ಸು: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.
ಮಕರ: ಹೊಸ ಉದ್ಯಮ ಪ್ರಾರಂಭಿಸುವಿರಿ.ಮನೆ ಖರೀದಿ. ಆರೋಗ್ಯ ಪ್ರಾಪ್ತಿ.
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ಕುಟುಂಬದವರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.