ನಿತ್ಯ ನೀತಿ : ಸತ್ಯದ ದಾರಿಯಲ್ಲಿ ನಡೆಯುವ ಜನರಿಗೆ ಅಡ್ಡಿ-ಆತಂಕ ಸಮಸ್ಯೆಗಳು ಅವಶ್ಯವಾಗಿ ಎದುರಾಗುತ್ತವೆ. ಆದರೆ, ರಾಯರು ಎಂದೂ ಅವರ ಜೀವನ ದೋಣಿಯನ್ನು ಮುಳುಗಲು ಬಿಡುವುದಿಲ್ಲ.
ಪಂಚಾಂಗ ಸೋಮವಾರ 09-01-2023
ಶುಭಕೃತ್ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಆಶ್ಲೇಷ / ಯೋಗ: ವಿಷ್ಕುಂಭ / ಕರಣ: ವಣಿಜ್
ಸೂರ್ಯೋದಯ : ಬೆ.06.44
ಸೂರ್ಯಾಸ್ತ : 06.09
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00
ರಾಶಿ ಭವಿಷ್ಯ
ಮೇಷ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮ ವಾಗಿ ನೆರವೇರಲಿವೆ.
ವೃಷಭ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸಲಹೆ ಪಡೆಯುವುದು ಸೂಕ್ತ.
ಮಿಥುನ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ.
ಕಟಕ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ಸಿಂಹ: ಅಧಿಕಾರ ವ್ಯಾಪ್ತಿ ಹೆಚ್ಚಾಗಲಿದೆ. ಕಿರುಕುಳ ಗಳಿಂದ ದೂರವಾಗುವಿರಿ.
ಕನ್ಯಾ: ನೆರೆಹೊರೆಯವ ರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವಿರಿ. ಕುಲದೇವರನ್ನು ಪ್ರಾರ್ಥಿಸಿ.
ತುಲಾ: ಉದ್ಯೋಗ ಸ್ಥಳದಲ್ಲಿ ನಡೆಯುವ ಎಲ್ಲ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ.
ವೃಶ್ಚಿಕ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.
ಧನುಸ್ಸು: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಮಕರ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕುಂಭ: ಮೇಲಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುವುದರಿಂದ ಉದ್ಯೋಗಕ್ಕೆ ತೊಂದರೆಯಾಗಲಿದೆ.
ಮೀನ: ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸುವುದು ಒಳಿತು.
#DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,