ನಿತ್ಯ ನೀತಿ : ಅದೃಷ್ಟ ಎಂದರೆ ಅವಕಾಶವನ್ನು ಪಡೆಯುವವನು. ಬುದ್ಧಿವಂತ ಎಂದರೆ ಅವಕಾಶವನ್ನು ಸೃಷ್ಟಿಸುವವನು.
ಪಂಚಾಂಗ ಗುರುವಾರ 09-02-2023
ಶುಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸುಕರ್ಮ / ಕರಣ: ಭವ
ಸೂರ್ಯೋದಯ : ಬೆ.06.44
ಸೂರ್ಯಾಸ್ತ : 06.24
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30
ರಾಶಿ ಭವಿಷ್ಯ
ಮೇಷ: ವಂಶಪಾರಂಪರ್ಯವಾಗಿ ಬಂದ ವ್ಯಾಪಾರ -ವ್ಯವಹಾರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಣುವಿರಿ.
ವೃಷಭ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.
ಮಿಥುನ: ಆರೋಗ್ಯದಲ್ಲಿ ಎಚ್ಚರಿಕೆ ತೀರ ಅಗತ್ಯ. ಬಂಧುಗಳೊಂದಿಗೆ ವೈಮನಸ್ಸು ಉಂಟಾದೀತು.
ಕಟಕ: ಇಷ್ಟವಾದ ವಸ್ತುಗಳನ್ನು ಖರೀದಿಸುವಿರಿ. ದೃಷ್ಟಿದೋಷ ತೊಂದರೆ ಎದುರಾಗಲಿದೆ.
ಸಿಂಹ: ಅಕ್ಕಪಕ್ಕದವರೊಂದಿಗೆ ಸಂಯಮದಿಂದ ನಡೆದು ಕೊಳ್ಳಿ. ನಾನಾ ರೀತಿಯಲ್ಲಿ ಹಣ ಕೈ ಸೇರಲಿದೆ.
ಕನ್ಯಾ: ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳು ಪರಿಹಾರ ವಾಗಬಹುದು.
ತುಲಾ: ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ವೃಶ್ಚಿಕ: ಹೊಸ ವಾಹನ ಖರೀದಿಸುವ ಆಲೋಚನೆ ಯನ್ನು ಮುಂದೂಡುವುದು ಬಹಳ ಒಳಿತು.
ಧನುಸ್ಸು: ಆಹಾರ ವ್ಯತ್ಯಾಸ ದಿಂದ ಪಿತ್ತ ಸಂಬಂಧಿ ಅನಾರೋಗ್ಯ ಕಾಡಬಹುದು.
ಮಕರ: ಸಗಟು ವ್ಯಾಪಾರಿಗೆ ಹೆಚ್ಚು ನಷ್ಟ ಉಂಟಾಗುವ ಸಂಭವವಿದೆ.
ಕುಂಭ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.
ಮೀನ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಧಿಸುವುದು ಬಹಳ ಸುಲಭ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,