Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-02-2024)

ನಿತ್ಯ ನೀತಿ : ನಂಬಿ ಅನುಭವಿಸುವುದಕ್ಕಿಂತ ಅನುಭವಿಸಿ ನಂಬುವುದೇ ಒಳ್ಳೆಯದು. ಶಾಶ್ವತ ಮತ್ತು ಸತ್ಯ.

ಪಂಚಾಂಗ ಶುಕ್ರವಾರ 09-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಶ್ರವಣ / ಯೋಗ: ವ್ಯತೀಪಾತ / ಕರಣ: ಚತುಷ್ಪಾದ

ಸೂರ್ಯೋದಯ : ಬೆ.06.44
ಸೂರ್ಯಾಸ್ತ : 06.24
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ವೃಷಭ: ಭೂ ವ್ಯವಹಾರದಲ್ಲಿ ತೊಡಗಿಕೊಂಡ ನಿಮಗೆ ಹೆಚ್ಚಿನ ಲಾಭ ಸಿಗಲಿದೆ.
ಮಿಥುನ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಸಲಹೆ ಪಡೆಯುವುದು ಅನಿವಾರ್ಯ.

ಕಟಕ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.
ಸಿಂಹ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.

ತುಲಾ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ.
ವೃಶ್ಚಿಕ: ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಧನುಸ್ಸು: ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಸಂತಸದ ದಿನ.

ಮಕರ: ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ ಕಾಣುವಿರಿ. ಮಕ್ಕಳಿಂದ ಶುಭವಾರ್ತೆ ಕೇಳುವಿರಿ.
ಕುಂಭ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.
ಮೀನ: ಕಹಿ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಿ. ಹಿರಿಯರ ಮಾತುಗಳನ್ನು ಗೌರವಿಸಿ.

RELATED ARTICLES

Latest News