ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-08-2022)

Social Share

ನಿತ್ಯ ನೀತಿ: ಶಕ್ತಿಶಾಲಿಗಳಾಗಿ, ಶ್ರದ್ಧಾವಂತರಾಗಿ. ಆಗ ಎಲ್ಲವೂ ನಿಶ್ಚಿತವಾಗಿ ಸಾಧಿಸಲ್ಪಡುತ್ತದೆ.

ಪಂಚಾಂಗ ಮಂಗಳವಾರ 09-08-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ /ವರ್ಷ ಋತು / ಶ್ರಾವಣ ಮಾಸ /ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಮೂಲಾ / ಮಳೆ ನಕ್ಷತ್ರ: ಆಶ್ಲೇಷ
ಸೂರ್ಯೋದಯ: ಬೆ.06.07
ಸೂರ್ಯಾಸ್ತ: 06.44
ರಾಹುಕಾಲ: 3.00-4.30
ಯಮಗಂಡ ಕಾಲ: 9.00-10.30
ಗುಳಿಕ ಕಾಲ :12.00-1.30

ರಾಶಿ ಭವಿಷ್ಯ
ಮೇಷ
: ಗೃಹ ನಿರ್ಮಾಣಕ್ಕೆ ಇದ್ದ ಅಡ್ಡಿ-ಆತಂಕಗಳು ದೂರವಾಗಲಿವೆ. ದೂರ ಪ್ರಯಾಣ ಮಾಡುವಿರಿ.
ವೃಷಭ: ಅದೃಷ್ಟವು ನಿಮ್ಮ ಕಡೆಗಿರುತ್ತದೆ. ಗುರು-ಹಿರಿಯರ ಆಶೀರ್ವಾದ ಪಡೆಯಿರಿ.
ಮಿಥುನ: ಬೇರೆಯವರು ಮಾಡಿದ ತಪ್ಪುಗಳಿಂದಾಗಿ ನೀವು ಶಿಕ್ಷೆ ಅನುಭವಿಸಬೇಕಾಗುತ್ತದೆ.

ಕಟಕ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗವಿದೆ.
ಸಿಂಹ: ಹಣದ ವಿಷಯದಲ್ಲಿ ದೊಡ್ಡ ಸಮಸ್ಯೆ ಇರುವುದಿಲ್ಲ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಯಂತ್ರೋಪಕಣ ಗಳನ್ನು ದುರಸ್ತಿ ಮಾಡುವ ವರಿಗೆ ಹೆಚ್ಚು ಕೆಲಸ ದೊರೆತು ಆದಾಯ ಸಿಗಲಿದೆ.

ತುಲಾ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
ವೃಶ್ಚಿಕ: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಸಮಸ್ಯೆಗಳು ದೂರವಾಗಲಿವೆ.
ಧನುಸ್ಸು: ಅವಿವಾಹಿತರಿಗೆ ಶುಭ ಫಲಗಳು ದೊರೆಯ ಲಿವೆ. ಹೂವಿನ ವ್ಯಾಪಾರಿಗಳಿಗೆ ಲಾಭ ಸಿಗಲಿದೆ.

ಮಕರ: ನೀವು ಆಡಿದ ಮಾತುಗಳನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ.
ಕುಂಭ: ಹಲವು ದಿನಗಳಿಂದ ಇದ್ದ ಶತ್ರುಬಾಧೆ ನಿವಾರಣೆಯಾಗಲಿದೆ. ಉತ್ತಮ ದಿನ.
ಮೀನ: ಉದ್ಯೋಗ ದೊರೆಯುವುದರಿಂದ ಸಮಸ್ಯೆಗಳು ಬಗೆಹರಿಯಲಿವೆ.

Articles You Might Like

Share This Article