Monday, March 4, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-12-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-12-2023)

ನಿತ್ಯ ನೀತಿ : ದುರ್ಬಲ ಮನಸ್ಸು ಹೊಂದಿದ ವ್ಯಕ್ತಿ ಅನೇಕ ಸಮಸ್ಯೆಗಳಿಗೆ ಕಾರಣನಾಗುತ್ತಾನೆ. ಎಲ್ಲಾ ದುಸ್ಥಿತಿಗೂ, ಸುಸ್ಥಿತಿಗೂ ತಾನೇ ಕರ್ತನು.

ಪಂಚಾಂಗ ಭಾನುವಾರ 10-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಸ್ವಾತಿ / ಯೋಗ: ಅತಿಗಂಡ / ಕರಣ: ಗರಜೆ

ಸೂರ್ಯೋದಯ : ಬೆ.06.31
ಸೂರ್ಯಾಸ್ತ : 05.54
ರಾಹುಕಾಲ: 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಧರ್ಮ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ವೃಷಭ: ಸ್ತ್ರೀಯರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಎಚ್ಚರಿಕೆಯಿಂದಿರಿ.
ಮಿಥುನ: ರಿಯಲ್ ಎಸ್ಟೇಟ್‍ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

ಕಟಕ: ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಸಿಂಹ: ಆದಾಯ ಹೆಚ್ಚಾದರೂ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು ಅನಿವಾರ್ಯ.
ಕನ್ಯಾ: ಸಂಗಾತಿಯೊಂದಿಗೆ ಚರ್ಚಿಸಿ ಹಣಕಾಸಿನ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಿ.

ತುಲಾ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಉತ್ತಮ.
ವೃಶ್ಚಿಕ: ವೃತ್ತಿ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ.
ಧನುಸ್ಸು: ಕೆಲಸ-ಕಾರ್ಯಗಳಲ್ಲಿ ತಾಳ್ಮೆ ಅಗತ್ಯ. ವಿವಾದಗಳಿಂದ ದೂರವಿರುವುದು ಒಳಿತು.

ಮಕರ: ಹೊಸ ಜನರನ್ನು ಭೇಟಿ ಮಾಡು ವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಕುಂಭ: ಆರ್ಥಿಕ ಏರುಪೇರಿನಿಂದಾಗಿ ಕುಟುಂಬದಲ್ಲಿ ಅಹಿತಕರ ವಾತಾವರಣ ಉಂಟಾಗಲಿದೆ.
ಮೀನ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.

RELATED ARTICLES

Latest News