ನಿತ್ಯ ನೀತಿ ; ಯಾವುದೇ ಒಳ್ಳೆಯ ಕಾರ್ಯವಾಗಲಿ ಪ್ರಯತ್ನವೆಂಬುದು ಅಧಿಕವಾದರೆ ಹಣೆಬರಹವೂ ಕೂಡ ಶಿರಬಾಗುತ್ತದೆ. ಇದು ನಿಶ್ಚಿತ.
ಪಂಚಾಂಗ ಸೋಮವಾರ 11-03-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಉತ್ತರಾಭಾದ್ರ / ಯೋಗ: ಶುಭ / ಕರಣ: ಬಾಲವ
ಸೂರ್ಯೋದಯ : ಬೆ.06.30
ಸೂರ್ಯಾಸ್ತ : 06.30
ರಾಹುಕಾಲ ; 7.30-9.00
ಯಮಗಂಡ ಕಾಲ ; 10.30-12.00
ಗುಳಿಕ ಕಾಲ ; 1.30-3.00
ರಾಶಿ ಭವಿಷ್ಯ
ಮೇಷ: ಮನೆಯಲ್ಲಿ ಮಂಗಳಕಾರ್ಯ ನಡೆಯುವ ಸೂಚನೆ ಕಾಣುತ್ತವೆ. ಸ್ವಂತ ಉದ್ಯೋಗ ಮಾಡುವವರಿಗೆ ಯಶಸ್ಸು ಸಿಗಲಿದೆ.
ವೃಷಭ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ಮಿಥುನ: ಸರ್ಕಾರಿ ಕೆಲಸ ಮಾಡುವವರು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗಬಹುದು.
ಕಟಕ: ಶಾಂತ ಮನಸ್ಸಿನಿಂದ ನಿಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಪ್ರಯತ್ನಿಸಿ.
ಸಿಂಹ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ. ವೈವಾಹಿಕ ಜೀವನದ ಬಗ್ಗೆ ಗಮನ ಕೊಡಿ.
ಕನ್ಯಾ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
ತುಲಾ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.
ವೃಶ್ಚಿಕ: ಸರ್ಕಾರಿ ಉದ್ಯೋಗಿಗಳಿಗೆ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ.
ಧನುಸ್ಸು: ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ರೀತಿಯಲ್ಲಿ ಪ್ರಯತ್ನ ಮಾಡುವಿರಿ.
ಮಕರ: ಖರ್ಚುಗಳು ಸ್ವಲ್ಪ ಹೆಚ್ಚಾಗಬಹುದು, ಆದರೆ ಯಾವುದೇ ದೊಡ್ಡ ಸಮಸ್ಯೆ ಇರುವುದಿಲ್ಲ.
ಕುಂಭ: ಸಣ್ಣ ವ್ಯಾಪಾರಸ್ಥರಿಗೆ ಅನುಕೂಲಕರ ದಿನ. ಲಾಭ ಗಳಿಸಲು ಹಲವು ಅವಕಾಶಗಳು ಒದಗಲಿವೆ.
ಮೀನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.