Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-01-2024)

ನಿತ್ಯ ನೀತಿ : ಬೇರೆಯವರು ನಮಗೆ ಒಳ್ಳೆಯದನ್ನು ಬಯಸುವರೋ, ಕೆಟ್ಟದ್ದನ್ನು ಬಯಸುವರೋ ಅದು ಅವರವರಿಗೆ ಸಂಬಂಧಪಟ್ಟಿದ್ದು. ಆದರೆ, ನಾವು ಮಾತ್ರ ಒಳ್ಳೆಯದನ್ನೇ ಬಯಸೋಣ.

ಪಂಚಾಂಗ ಶುಕ್ರವಾರ 12-01-2024
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಉತ್ತರಾಷಾಢ / ಯೋಗ: ಹರ್ಷಣ / ಕರಣ: ಬಾಲವ

ಸೂರ್ಯೋದಯ : ಬೆ.06.45
ಸೂರ್ಯಾಸ್ತ : 06.11
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಇನ್ನೊಬ್ಬರ ಮಾತುಗಳನ್ನು ಆಲಿಸಿ ತೀರ್ಮಾನಕ್ಕೆ ಬರುವುದು ಅನಿರ್ವಾಯವಾಗಲಿದೆ.
ವೃಷಭ: ಮಾತಿನಿಂದ ಕಾರ್ಯ ಸಾಧಿಸುವ ನಿಮ್ಮ ಗುಣದಿಂದ ಅನುಕೂಲಕರ ವಾತಾವರಣ ನಿರ್ಮಾಣವಾಗುವುದು.
ಮಿಥುನ: ಅಕ್ಕಪಕ್ಕದವರೊಂದಿಗೆ ಸಂಯಮದಿಂದ ನಡೆದುಕೊಳ್ಳಿ. ನಾನಾ ರೀತಿಯಲ್ಲಿ ಹಣ ಕೈ ಸೇರಲಿದೆ.

ಕಟಕ: ರಫ್ತು ಮಾರಾಟದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆ ಎದುರಾದರೂ ಆದಾಯಕ್ಕೆ ತೊಂದರೆಯಿಲ್ಲ.
ಸಿಂಹ: ನಿಮ್ಮ ವ್ಯವಹಾರಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಅಭಿವೃದ್ಧಿ ಸಾಧಿಸುವಿರಿ.
ಕನ್ಯಾ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ದೊರೆಯಲಿದೆ.

ತುಲಾ: ವೈರಾಗ್ಯ ಹೊಂದಿರುವ ನೀವು ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಪರಿಶ್ರಮದಿಂದ ದುಡಿದರೆ ಪ್ರಗತಿಯ ಹಾದಿ ಕಾಣುವಿರಿ.
ವೃಶ್ಚಿಕ: ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಬಹುದು. ಆರೋಗ್ಯದಲ್ಲಿ ಏರುಪೇರಾಗಲಿದೆ.
ಧನುಸ್ಸು: ವ್ಯಾವಹಾರಿಕ ಜೀವನದ ಕೆಲವು ಮುಖ್ಯವಾದ ನಿರ್ಧಾರಗಳನ್ನು ಕೈಗೊಳ್ಳುವಿರಿ.

ಮಕರ: ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಒಡಹುಟ್ಟಿದವರಲ್ಲಿ ಭಾವನಾತ್ಮಕ ಸಂಬಂಧ ಬೆಳೆಸಿಕೊಳ್ಳಿ. ದೂರ ಪ್ರಯಾಣ ಮಾಡುವುದು ಬೇಡ.
ಮೀನ: ನೀವು ಮಾಡುವ ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ಅನಿರೀಕ್ಷಿತ ಧನಲಾಭವಾಗಲಿದೆ.

RELATED ARTICLES

Latest News