Tuesday, May 21, 2024
Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (13-02-2024)

ನಿತ್ಯ ನೀತಿ : ಇತರರಿಗಾಗಿ ನಿಮ್ಮ ಸ್ವಂತಿಕೆಯನ್ನು ಎಂದಿಗೂ ಬಿಟ್ಟುಕೊಡಬೇಡಿ. ಏಕೆಂದರೆ ಈ ಪ್ರಪಂಚದಲ್ಲಿ ನಿಮ್ಮ ಪಾತ್ರವನ್ನು ನಿಮಗಿಂತ ಚೆನ್ನಾಗಿ ಯಾರೂ ನಿಭಾಯಿಸಲು ಸಾಧ್ಯವಿಲ್ಲ.

ಪಂಚಾಂಗ ಮಂಗಳವಾರ 13-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಸಾಧ್ಯ / ಕರಣ: ಭವ

ಸೂರ್ಯೋದಯ : ಬೆ.06.43
ಸೂರ್ಯಾಸ್ತ : 06.25
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಬಂಧುಗಳೊಂದಿಗೆ ವೈಮನಸ್ಸು ಉಂಟಾಗ ದಂತೆ ನೋಡಿಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ವೃಷಭ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಪ್ರತಿಭೆಗೆ ತಕ್ಕ ಪ್ರತಿಫಲ ದೊರೆಯುವುದು.
ಮಿಥುನ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ.

ತುಲಾ: ನೀವು ಕಂಡ ಕನಸು ಗಳಿಗೆ ಸ್ನೇಹಿತರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಕುಂಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

RELATED ARTICLES

Latest News