ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-11-2022)

Social Share

ನಿತ್ಯ ನೀತಿ: ಅಹಂಕಾರವಿಲ್ಲದ ಮನುಷ್ಯ ಯಾವ ಧರ್ಮಗ್ರಂಥವನ್ನೂ ಓದದೆ, ಯಾವ ಮಂದಿರವನ್ನೂ ಪ್ರವೇಶಿಸದೆ ಮೋಕ್ಷ ಪಡೆಯಬಹುದು.

ಪಂಚಾಂಗ ಸೋಮವಾರ 14-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಪುನರ್ವಸು / ಮಳೆ ನಕ್ಷತ್ರ: ವಿಶಾಖ
ಸೂರ್ಯೋದಯ: ಬೆ.06.18
ಸೂರ್ಯಾಸ್ತ: 05.50
ರಾಹುಕಾಲ: 7.30-9.00
ಯಮಗಂಡ ಕಾಲ: 10.30-12.00
ಗುಳಿಕ ಕಾಲ: 1.30-3.00

ರಾಶಿ ಭವಿಷ್ಯ
ಮೇಷ
: ಸೌಜನ್ಯತೆಯಿಂದ ನಡೆದುಕೊಳ್ಳುವುದರಿಂದ ನೆರೆಹೊರೆಯವರು ನಿಮಗೆ ಸ್ಪಂದಿಸುವರು.
ವೃಷಭ: ನಿರೀಕ್ಷಿತ ಧನಾಗಮನವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮಿಥುನ: ಧಾರ್ಮಿಕ ಕಾರ್ಯಗಳಿಗೆ ಹಣ ವ್ಯಯ ಮಾಡುವಿರಿ. ಮಕ್ಕಳಿಂದ ಸಂತೋಷ ಸಿಗಲಿದೆ.

ಕಟಕ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯುವುದು ಅನಿವಾರ್ಯವಾಗಲಿದೆ.
ಸಿಂಹ: ಲೇವಾದೇವಿ ವ್ಯವಹಾರ ನಡೆಸುವುದು ಸರಿಯಲ್ಲ. ಸೋಮಾರಿತನ ಶತ್ರುವಾಗಿ ಪರಿಣಮಿಸಲಿದೆ.
ಕನ್ಯಾ: ಕೆಲಸ-ಕಾರ್ಯಗಳಲ್ಲಿ ಜನಪ್ರಿಯತೆ ಗಳಿಸುವಿರಿ. ನಿರೀಕ್ಷಿತ ಸ್ಥಾನಮಾನ ಸಿಗಲಿದೆ.

ತುಲಾ: ಅನಗತ್ಯ ಚರ್ಚೆಗಳಿಗೆ ಆಸ್ಪದ ನೀಡದಿರಿ. ಸಾಲ ಮಾಡುವ ಸ್ಥಿತಿ ತಂದುಕೊಳ್ಳಬೇಡಿ.
ವೃಶ್ಚಿಕ: ಶುಭ ಸಮಾರಂಭಗಳು ನಡೆಯುವುದರಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಧನುಸ್ಸು: ಮೇಲಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸುವುದರಿಂದ ಉದ್ಯೋಗಕ್ಕೆ ತೊಂದರೆಯಾಗಲಿದೆ.

ಮಕರ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಕುಂಭ: ಉದ್ಯೋಗ ಸ್ಥಳದಲ್ಲಿ ನಡೆಯುವ ಎಲ್ಲ ವಿಷಯಗಳನ್ನು ಗಂಭೀರವಾಗಿ ಪರಿಗಣಿಸದಿರಿ.
ಮೀನ: ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವಿರಿ. ಕುಲದೇವರನ್ನು ಪ್ರಾರ್ಥಿಸಿ.

Articles You Might Like

Share This Article