ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-11-2022)

Social Share

ನಿತ್ಯ ನೀತಿ: ಈ ಪ್ರಪಂಚ ಒಂದು ದೊಡ್ಡ ಗರಡಿ ಮನೆ. ನಾವಿಲ್ಲಿ ಬಲಿಷ್ಠರಾಗುವುದಕ್ಕೆ ಬಂದಿದ್ದೇವೆ.

ಪಂಚಾಂಗ ಮಂಗಳವಾರ 15-11-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪುಷ್ಯ / ಮಳೆ ನಕ್ಷತ್ರ: ವಿಶಾಖ

ಸೂರ್ಯೋದಯ: ಬೆ.06.18
ಸೂರ್ಯಾಸ್ತ: 05.50
ರಾಹುಕಾಲ: 3.00-4.30
ಯಮಗಂಡ ಕಾಲ: 9.00-10.30
ಗುಳಿಕ ಕಾಲ: 12.00-1.30

ರಾಶಿ ಭವಿಷ್ಯ
ಮೇಷ
: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ವೃಷಭ: ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ದುಡಿಯುವ ನಿಮ್ಮ ಮೇಲೆ ಮೇಲಧಿಕಾರಿಗಳಿಗೆ ಹೆಚ್ಚು ಭರವಸೆ ಮೂಡಲಿದೆ.
ಮಿಥುನ: ವಿದ್ಯಾರ್ಥಿಗಳಿಗೆ ವಿದ್ಯೆಯ ವಿಚಾರದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

ಕಟಕ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ.
ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮ ವಾಗಿ ನೆರವೇರಲಿವೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.

ತುಲಾ: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ.
ವೃಶ್ಚಿಕ: ಹಿಂಜರಿಕೆ ಮತ್ತು ಭಯದ ಸ್ವಭಾವ ಕಾರ್ಯಕ್ಷೇತ್ರದಲ್ಲಿ ಹಿನ್ನಡೆಗೆ ಕಾರಣವಾಗಲಿದೆ.
ಧನುಸ್ಸು: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.

ಮಕರ: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಕುಂಭ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಮೀನ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.

Articles You Might Like

Share This Article