ನಿತ್ಯ ನೀತಿ: ಗಿಡದಲ್ಲಿ ಎಷ್ಟೇ ಮುಳ್ಳುಗಳಿದ್ದರೂ ಅದರಲ್ಲಿ ಹೂವು ಅರಳಬೇಕು. ಹಾಗೆಯೇ ನಮ್ಮ ಮನಸ್ಸಿನಲ್ಲಿ ಎಷ್ಟೇ ನೋವುಗಳು ತುಂಬಿದ್ದರೂ ಮುಖದಲ್ಲಿ ನಗು ತುಂಬಿರಬೇಕು.
ಪಂಚಾಂಗ ಗುರುವಾರ 15-12-2022
ಶುಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು /ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪೂರ್ವಾಭಾದ್ರ / ಮಳೆ ನಕ್ಷತ್ರ: ಜ್ಯೇಷ್ಠ
ಸೂರ್ಯೋದಯ : ಬೆ.06.34
ಸೂರ್ಯಾಸ್ತ : 05.55
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00
ರಾಶಿ ಭವಿಷ್ಯ
ಮೇಷ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ.ಅಧಿಕಾರಿಗಳಿಂದ ಮನ್ನಣೆ ಗಳಿಸುವಿರಿ.
ವೃಷಭ: ಹಿರಿಯರ ಸಲಹೆ-ಸೂಚನೆಗಳನ್ನು ಸ್ವೀಕರಿಸಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಮಿಥುನ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.
ಕಟಕ: ಅಪರಿಚಿತರೊಂದಿಗೆ ಹಣಕಾಸಿನ ವ್ಯವಹಾರ ಮಾಡದಿರಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಸಿಂಹ: ಒಡಹುಟ್ಟಿದವರ ಸಹಕಾರದಿಂದ ಮಾನಸಿಕ ನೆಮ್ಮದಿ ಸಿಗಲಿದೆ.
ಕನ್ಯಾ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಒಳ್ಳೆಯದು.
ತುಲಾ: ಕೆಲವು ಯೋಜನೆ ಗಳ ಬಗ್ಗೆ ದೃಢ ನಿರ್ಧಾರ ತೆಗೆದುಕೊಳ್ಳುವಲ್ಲಿ ನೆರೆಹೊರೆ ಯವರ ಸಲಹೆ ಪಡೆಯಿರಿ.
ವೃಶ್ಚಿಕ: ಮೇಲಧಿಕಾರಿ ಗಳೊಂದಿಗೆ ಅನುಚಿತವಾಗಿ ವರ್ತಿಸುವುದರಿಂದ ಬಹಳ ತೊಂದರೆ ಅನುಭವಿಸಬೇಕಾಗುತ್ತದೆ.
ಧನುಸ್ಸು: ಪ್ರಾಮಾಣಿಕತೆಯಿಂದ ದುಡಿಯುವ ನಿಮ್ಮ ಮೇಲೆ ಮೇಲಧಿಕಾರಿಗಳಿಗೆ ಭರವಸೆ ಮೂಡಲಿದೆ.
ಮಕರ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಅನುಭವಿಸು ವಿರಿ. ಸಾಲದಿಂದ ತೊಂದರೆ ಯಾಗಲಿದೆ.
ಕುಂಭ: ವ್ಯವಹಾರಕ್ಕೆ ಸಂಬಂಧಿಸಿದಂತೆ ಕಾನೂನು ವಿಷಯದಲ್ಲಿ ಹೆಚ್ಚಿನ ಸಲಹೆ ಪಡೆಯಿರಿ.
ಮೀನ: ಆಸ್ತಿ ಖರೀದಿಗೆ ಯೋಚಿಸುವಿರಿ. ಪಾಲು ದಾರಿಕೆ ವ್ಯವಹಾರದಲ್ಲಿ ಕಿರಿಕಿರಿ ಉಂಟಾಗಲಿದೆ.
DailyHoroscope, #Horoscope, #KannadaHoroscope, #TodayHoroscope, #ರಾಶಿಭವಿಷ್ಯ,