ನಿತ್ಯ ನೀತಿ ; ಒಬ್ಬರ ತಾಳ್ಮೆಯನ್ನು ಅಸಹಾಯಕತೆ ಎಂದುಕೊಳ್ಳಬಾರದು. ತಾಳ್ಮೆ ಹಿಂದಿನ ತಯಾರಿ ಬಹಳ ಗಟ್ಟಿಯಾಗಿರುತ್ತದೆ.
ಪಂಚಾಂಗ ಗುರುವಾರ 16-05-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಮಘಾ / ಯೋಗ: ಧ್ರುವ / ಕರಣ: ಬಾಲವ
ಸೂರ್ಯೋದಯ : ಬೆ.05.54
ಸೂರ್ಯಾಸ್ತ : 06.38
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30
ರಾಶಿ ಭವಿಷ್ಯ
ಮೇಷ: ವ್ಯಾಪಾರದಲ್ಲಿ ಶತ್ರುಗಳ ಕಾಟ. ನಿವೇಶನ ಖರೀದಿಗೆ ನಿರ್ಧಾರ ಮಾಡುವಿರಿ.
ವೃಷಭ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಮಿಥುನ: ಕಚೇರಿ ಕೆಲಸವನ್ನು ನಿಷ್ಠೆಯಿಂದ ಮಾಡು ವಿರಿ. ಅನ್ಯರಿಗೆ ಉಪಕಾರ ಮಾಡಲು ಮುಂದಾಗಿ.
ಕಟಕ: ಮೋಜು-ಮಸ್ತಿಯಲ್ಲಿ ತೊಡಗುವಿರಿ.
ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ತುಲಾ: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ವೃಶ್ಚಿಕ: ಉಪನ್ಯಾಸಕ ವೃತ್ತಿಯವರಿಗೆ ನಷ್ಟ.
ಧನುಸ್ಸು: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಮಕರ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.
ಕುಂಭ: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.
ಮೀನ: ಜವಾಬ್ದಾರಿ ಸ್ವೀಕರಿಸುವ ಮೊದಲು ಅದನ್ನು ನಿಭಾಯಿಸುವ ಬಗ್ಗೆ ಯೋಚಿಸಿ.