Friday, December 13, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-02-2024)

ನಿತ್ಯ ನೀತಿ : ಮಾತು ವೈರಿಗಳ ಮುಂದೆ ಗತ್ತಿನಂತಿರಬೇಕು. ಹೆದರಿಸುವವರ ಮುಂದೆ ಕತ್ತಿಯಂತಿರಬೇಕು. ಆತ್ಮೀಯರ ಮುಂದೆ ಮುತ್ತಿನಂತಿರಬೇಕು. ಹಿರಿಯರ ಮುಂದೆ ಹತ್ತಿಯಂತಿರಬೇಕು.

ಪಂಚಾಂಗ ಶನಿವಾರ 17-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಕೃತ್ತಿಕಾ / ಯೋಗ: ಐಂದ್ರ / ಕರಣ: ಬಾಲವ

ಸೂರ್ಯೋದಯ : ಬೆ.06.42
ಸೂರ್ಯಾಸ್ತ : 06.26
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ವೃಷಭ: ಕಚೇರಿ ಕೆಲಸವನ್ನು ಮನಃಪೂರ್ವಕವಾಗಿ ಮಾಡಿ. ಅನ್ಯರಿಗೆ ಉಪಕಾರ ಮಾಡುವಿರಿ.
ಮಿಥುನ: ಬಂಧುಗಳನ್ನು ವಿನಾಕಾರಣ ದ್ವೇಷಿಸುವಿರಿ.

ಕಟಕ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಸಿಂಹ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕನ್ಯಾ: ಉನ್ನತ ಅಧಿಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗುವುದು.

ತುಲಾ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ. ತಾಯಿಯ ಆರೋಗ್ಯದಲ್ಲಿ ಚೇತರಿಕೆ.
ವೃಶ್ಚಿಕ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.

ಮಕರ: ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆ ಯಾಗುವುದರಿಂದ ವೈದ್ಯರನ್ನು ಭೇಟಿ ಮಾಡಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.

RELATED ARTICLES

Latest News