Friday, May 10, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-01-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-01-2024)

ನಿತ್ಯ ನೀತಿ : ಒಳ್ಳೆಯ ಜನರು ನಿಮಗೆ ಸಂತೋಷ ಕೊಟ್ಟರೆ ಕೆಟ್ಟ ಜನರು ನಿಮಗೆ ಅನುಭವ ಕೊಡುತ್ತಾರೆ ಎಂಬುದನ್ನು ಯಾವಾಗಲೂ ನೆನಪಿಡಿ.

ಪಂಚಾಂಗ ಗುರುವಾರ 18-01-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಅಶ್ವಿನಿ / ಯೋಗ: ಸಿದ್ಧ / ಕರಣ: ವಿಷ್ಟಿ

ಸೂರ್ಯೋದಯ : ಬೆ.06.46
ಸೂರ್ಯಾಸ್ತ : 06.14
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಮನೆಯಲ್ಲಿ ಹಿರಿಯರ ಆರೋಗ್ಯ ದಿನದಿಂದ ದಿನಕ್ಕೆ ಉತ್ತಮಗೊಳ್ಳುವುದರಿಂದ ನೆಮ್ಮದಿ ಸಿಗಲಿದೆ.
ವೃಷಭ: ವಿದೇಶಿ ವ್ಯಾಪಾರದಲ್ಲಿ ಹೆಚ್ಚು ಬಂಡವಾಳ ಹೂಡುವುದು ಸೂಕ್ತವಲ್ಲ. ಎಚ್ಚರಿಕೆಯಿಂದಿರಿ.
ಮಿಥುನ: ಉದ್ಯೋಗದ ಅನಿವಾರ್ಯತೆ ಬಿಟ್ಟು ಆರೋಗ್ಯದ ಬಗ್ಗೆ ಗಮನ ಹರಿಸುವುದು ಒಳಿತು.

ಕಟಕ: ಔಷಧಿ ವ್ಯಾಪಾರಿ ಗಳಿಗೆ ಆದಾಯದ ಇನ್ನೊಂದು ಮೂಲ ಸಿಗುವುದು.
ಸಿಂಹ: ಆರೋಗ್ಯ ಕಾಪಾಡಿ ಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಬೇಕಾಗಬಹುದು.
ಕನ್ಯಾ: ಸಣ್ಣ ತಪ್ಪುಗಳಾಗಬಹುದು. ಇದರಿಂದ ಉನ್ನತ ಅಧಿಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳುವರು.

ತುಲಾ: ಸರ್ಕಾರಿ ಕೆಲಸ ಮಾಡುವವರು ಕೆಲವು ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ವೃಶ್ಚಿಕ: ಕೆಲಸ-ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲ.
ಧನುಸ್ಸು: ವೃತ್ತಿ ಜೀವನದಲ್ಲಿ ಒಳ್ಳೆಯ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ.

ಮಕರ: ಕಷ್ಟದಲ್ಲಿ ಪ್ರೀತಿಪಾತ್ರರ ಸಂಪೂರ್ಣ ಬೆಂಬಲವನ್ನು ನೀವು ಪಡೆಯುತ್ತೀರಿ.
ಕುಂಭ: ಸಾಮಾಜಿಕ ಮಟ್ಟದಲ್ಲಿ ಚರ್ಚೆ ಮಾಡುವುದನ್ನು ನಿಲ್ಲಿಸಬೇಕು.
ಮೀನ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.

RELATED ARTICLES

Latest News