ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2022)

Social Share

ನಿತ್ಯ ನೀತಿ: ಪ್ರಾಣಿ ಸಹಜ ವ್ಯಕ್ತಿಯನ್ನು ಮನುಷ್ಯನನ್ನಾಗಿಸಿ, ಮನುಷ್ಯನನ್ನು ದೇವರನ್ನಾಗಿಸುವ ಭಾವನೆಯೇ ಧರ್ಮ.

ಪಂಚಾಂಗ ಮಂಗಳವಾರ 18-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪುಷ್ಯ / ಮಳೆ ನಕ್ಷತ್ರ: ಚಿತ್ತಾ

ಸೂರ್ಯೋದಯ: ಬೆ.06.10
ಸೂರ್ಯಾಸ್ತ: 05.59
ರಾಹುಕಾಲ: 3.00-4.30
ಯಮಗಂಡ ಕಾಲ: 9.00-10.30
ಗುಳಿಕ ಕಾಲ: 12.00-1.30

ರಾಶಿ ಭವಿಷ್ಯ

ಮೇಷ: ವಿದ್ಯಾರ್ಥಿಗಳಿಗೆ ಮಾನಸಿಕ ಅಸ್ಥಿರತೆ ಕಾಡಲಿದೆ. ದೂರ ಪ್ರಯಾಣ ಮಾಡುವುದು ಬೇಡ.
ವೃಷಭ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಮಿಥುನ: ಕೆಲಸಕ್ಕೆ ಪ್ರಯತ್ನಿಸುವವರಿಗೆ ಹೊಸ ಉದ್ಯೋಗ ಸಿಕ್ಕಿ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ಕಟಕ: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.
ಸಿಂಹ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ತುಲಾ: ಹಿರಿಯ ಅಧಿಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಬಂಧುಗಳಲ್ಲಿ ವಿಶ್ವಾಸ, ಸಂಬಂಧ ಬೆಳೆಸಿಕೊಳ್ಳುವತ್ತ ಪ್ರಯತ್ನಿಸಿ.

ಮಕರ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.

Articles You Might Like

Share This Article