Friday, May 10, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-02-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (20-02-2024)

ನಿತ್ಯ ನೀತಿ : ದುಡ್ಡು ಎಂದಿಗೂ ಮನುಷ್ಯನನ್ನು ಸುಖಿಯಾಗಿಸದು. ಅದು ಹೆಚ್ಚು ಬಂದಷ್ಟೂ ಹೆಚ್ಚು ಆಸೆಗಳು ಹುಟ್ಟಿಕೊಳ್ಳುತ್ತವೆ.

ಪಂಚಾಂಗ ಮಂಗಳವಾರ 20-02-2024
ಶೋಭಕೃತ್‍ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಆರಿದ್ರಾ / ಯೋಗ: ಪ್ರೀತಿ / ಕರಣ: ಭವ

ಸೂರ್ಯೋದಯ : ಬೆ.06.40
ಸೂರ್ಯಾಸ್ತ : 06.27
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ವ್ಯಾಪಾರದಲ್ಲಿ ಅನುಕೂಲವಾಗಲಿದೆ. ಸಂಗಾತಿ ಮನೆ ಕಡೆಯಿಂದ ಶುಭ ಸುದ್ದಿ ಬರಲಿದೆ.
ವೃಷಭ: ಉದ್ಯೋಗದಲ್ಲಿ ಸಮಸ್ಯೆ ಕಂಡುಬರಲಿದೆ. ಇತರ ರೊಂದಿಗಿನ ಜಗಳದಿಂದಾಗಿ ನೆಮ್ಮದಿ ಇರುವುದಿಲ್ಲ.
ಮಿಥುನ: ತಾಳ್ಮೆಯಿಂದ ವರ್ತಿಸಿದರೆ ಸುಲಭವಾಗಿ ಕಾರ್ಯಸಾಧನೆಯಾಗಲಿದೆ.

ಕಟಕ: ನೂತನ ವ್ಯವಹಾರಕ್ಕೆ ಕೈ ಹಾಕಿ ದುಡುಕದಿರಿ. ಆಲೋಚಿಸಿ ತೀರ್ಮಾನ ಕೈಗೊಳ್ಳಿ.
ಸಿಂಹ: ಅಪೇಕ್ಷಿತ ಜನರಿಂದ ಕಾರ್ಯಸಾಧನೆಯಾಗಲಿದೆ.
ಕನ್ಯಾ: ವ್ಯಾಪಾರದಲ್ಲಿ ನಷ್ಟ ಉಂಟಾದರೂ ಕೆಲವು ಶುಭ ಫಲಗಳನ್ನು ನಿರೀಕ್ಷಿಸಬಹುದು.

ತುಲಾ: ಆಕಸ್ಮಿಕ ಧನಲಾಭವಾಗುವುದು. ಬಂಧು-ಮಿತ್ರರ ಸಹಾಯ ದೊರೆಯಲಿದೆ.
ವೃಶ್ಚಿಕ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲಿವೆ.
ಧನುಸ್ಸು: ಉತ್ತಮ ದೈವಬಲವಿದ್ದು, ಎಲ್ಲ ರೀತಿಯ ಅನುಕೂಲಗಳು ದೊರೆಯಲಿವೆ.

ಮಕರ: ದೈನಂದಿನ ಚಟುವಟಿಕೆಗಳಲ್ಲಿ ಅಭಿವೃದ್ಧಿ ಸಿಗಲಿದೆ. ದೂರ ಪ್ರಯಾಣ ಮಾಡುವಿರಿ.
ಕುಂಭ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.
ಮೀನ: ಉದ್ಯೋಗದಲ್ಲಿ ತೊಂದರೆಗಳು ಕಾಣಿಸಿಕೊಳ್ಳಲಿವೆ. ವ್ಯಾಪಾರಿಗಳಿಗೆ ಅಲ್ಪ ಲಾಭ.

RELATED ARTICLES

Latest News