ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2022)

Social Share

ನಿತ್ಯ ನೀತಿ: ಜೀವನದಲ್ಲಿ ಏನೇ ಸವಾಲುಗಳು ಬಂದರೂ ಅದನ್ನು ಸಮರ್ಥವಾಗಿ ಎದುರಿಸುವ ಆತ್ಮಬಲ ನಮ್ಮಲ್ಲಿರಬೇಕು. ಅಳುತ್ತಾ ಬದುಕುವುದಕ್ಕಿಂತ ಅರಳುತ್ತಾ ಬದುಕಬೇಕು.

ಪಂಚಾಂಗ ಶನಿವಾರ 24-09-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ /ವರ್ಷ ಋತು /ಭಾದ್ರಪದ ಮಾಸ / ಕೃಷ್ಣ ಪಕ್ಷ /ತಿಥಿ: ಚತುರ್ದಶಿ /ನಕ್ಷತ್ರ: ಪೂರ್ವಾಭಾದ್ರ /ಮಳೆ ನಕ್ಷತ್ರ:ಉತ್ತರಫಲ್ಗುಣಿ

ಸೂರ್ಯೋದಯ: ಬೆ.06.09
ಸೂರ್ಯಾಸ್ತ: 06.15
ರಾಹುಕಾಲ: 9.00-10.30
ಯಮಗಂಡ ಕಾಲ: 1.30-3.00
ಗುಳಿಕ ಕಾಲ: 6.00-7.30

ರಾಶಿ ಭವಿಷ್ಯ
ಮೇಷ
: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ವೃಷಭ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಮಿಥುನ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ. ಮೇಲಧಿಕಾರಿಗಳೊಂದಿಗೆ ಮೆಚ್ಚುಗೆ ಪಡೆಯಲು ಹೆಚ್ಚಿನ ಪ್ರಯತ್ನ ನಡೆಸಿ.

ಕಟಕ: ನಿಮ್ಮ ಕೆಲಸ-ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಉದ್ಯೋಗಿಗಳು ಅಲ್ಪ ಪ್ರಗತಿ ಕಾಣುವರು.
ಸಿಂಹ: ಲೇವಾದೇವಿ ವ್ಯವಹಾರಗಳು ನಿರಂತರ ವಾಗಿ ಮುಂದುವರೆಯಲಿವೆ.
ಕನ್ಯಾ: ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸಿ.

ತುಲಾ: ಒಡಹುಟ್ಟಿದವರ ಸಹಾಯ-ಸಹಕಾರದಿಂದ ಮಾನಸಿಕ ನೆಮ್ಮದಿ ಮತ್ತು ಸಂಸಾರದಲ್ಲಿ ಸಮತೋಲನ ಕಾಪಾಡಿಕೊಳ್ಳುವಿರಿ.
ವೃಶ್ಚಿಕ: ಆಹಾರದಲ್ಲಾಗುವ ವ್ಯತ್ಯಾಸದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಧನುಸ್ಸು: ಅಕ್ಕಪಕ್ಕದವರ ಕಷ್ಟ-ಸುಖಗಳಿಗೆ ನೆರ ವಾಗುವುದರಿಂದ ಅವರ ಪ್ರಶಂಸೆಗೆ ಪಾತ್ರರಾಗುವಿರಿ.

ಮಕರ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.
ಕುಂಭ: ದಾಯಾದಿ ಕಲಹವಾಗಬಹುದು. ದೂರ ಪ್ರಯಾಣ ಮಾಡದಿರುವುದು ಒಳಿತು.
ಮೀನ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಿರಿಯರ ಸಲಹೆ ಪಡೆದು ಕೆಲಸ ಮುಂದುವರೆಸಿ.

Articles You Might Like

Share This Article