ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-10-2022)

Social Share

ನಿತ್ಯ ನೀತಿ: ಯಾರು ಯಾರ ವಿರುದ್ಧ ಏನೇ ಸಂಚು, ಷಡ್ಯಂತ್ರ, ಯೋಜನೆ ರೂಪಿಸಿದರೂ ಅಂತಿಮ ನಿರ್ಧಾರ ಭಗವಂತನದ್ದು.

ಪಂಚಾಂಗ ಸೋಮವಾರ 24-10-2022
ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಹಸ್ತ / ಮಳೆ ನಕ್ಷತ್ರ: ಸ್ವಾತಿ

ಸೂರ್ಯೋದಯ: ಬೆ.06.11
ಸೂರ್ಯಾಸ್ತ: 05.56
ರಾಹುಕಾಲ: 7.30-9.00
ಯಮಗಂಡ ಕಾಲ: 10.30-12.00
ಗುಳಿಕ ಕಾಲ: 1.30-3.00

ರಾಶಿ ಭವಿಷ್ಯ
ಮೇಷ
: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.
ವೃಷಭ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ಮಿಥುನ: ನಿರೀಕ್ಷಿಸಿದಂತೆ ಅಧಿಕ ಧನಲಾಭ ದೊರೆಯಲಿದೆ. ಜನಮನ್ನಣೆ ಗಳಿಸುವಿರಿ.

ಕಟಕ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಧಿಸುವಿರಿ.
ಸಿಂಹ: ಮನೆಗೆ ಬಂದ ಅತಿಥಿ ಗಳು ನಿಮ್ಮ ಮನೆಯಲ್ಲೇ ಉಳಿದುಕೊಳ್ಳುವರು.

ಕನ್ಯಾ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗದಿರಿ. ಆರೋಗ್ಯದ ಬಗ್ಗೆ ಗಮನ ಹರಿಸಿ.
ತುಲಾ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ವೃಶ್ಚಿಕ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.

ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮಕರ: ಬ್ಯಾಂಕ್ ಉದ್ಯೋಗಕ್ಕಾಗಿ ಮಾಡಿದ ಪ್ರಯತ್ನ ವ್ಯರ್ಥವಾಗಲಿದೆ.
ಕುಂಭ: ಗೆಳೆಯರೊಂದಿಗೆ ದೂರ ಪ್ರಯಾಣ ಮಾಡುವ ಸಾಧ್ಯತೆಗಳಿವೆ.
ಮೀನ: ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ಕುಲದೇವತೆ ನಿಂದನೆ ಒಳ್ಳೆಯದಲ್ಲ.

Articles You Might Like

Share This Article