Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-11-2023)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-11-2023)

ನಿತ್ಯ ನೀತಿ : ಅಧ್ಯಾತ್ಮ ಲೋಕದಲ್ಲಿ ಮೇಲು ಕೀಳೆಂಬ ತಾರತಮ್ಯ ಮಾಡಬಾರದು. ಅಲ್ಲಿ ಎಲ್ಲರೂ ಸಮಾನರು. ಯಾರೊಬ್ಬನೂ ತಾನು ಇನ್ನೊಬ್ಬರಿಗಿಂತ ಶ್ರೇಷ್ಠ ಎಂದು ಭಾವಿಸಬಾರದು.

ಪಂಚಾಂಗ ಮಂಗಳವಾರ 28-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ರೋಹಿಣಿ / ಯೋಗ: ಸಿದ್ಧ / ಕರಣ: ತೈತಿಲ

ಸೂರ್ಯೋದಯ : ಬೆ.06.24
ಸೂರ್ಯಾಸ್ತ : 05.51
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.
ವೃಷಭ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಮಿಥುನ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.

ಕಟಕ: ನೆರೆಹೊರೆಯವ ರೊಂದಿಗೆ ಕಲಹ ಉಂಟಾಗಬಹುದು.
ಸಿಂಹ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.
ಕನ್ಯಾ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.

ತುಲಾ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ವೃಶ್ಚಿಕ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.
ಧನುಸ್ಸು: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.

ಮಕರ: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಕುಂಭ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.
ಮೀನ: ಸ್ವಂತ ಮನೆ ಹೊಂದುವ ಹಂಬಲ ಈಡೇರಲಿದೆ. ವ್ಯಾಪಾರಿಗಳಿಗೆ ಲಾಭದಾಯಕ ದಿನ.

RELATED ARTICLES

Latest News