ನಿತ್ಯ ನೀತಿ : ಯುವಕ-ಯುವತಿಯರ ಮನಸ್ಸಿಗೆ ಧರ್ಮ, ಜ್ಞಾನಗಳ ಅಮೃತ ಆಹಾರವನ್ನು ಉಣಬಡಿಸಬೇಕು. ನಮ್ಮ ಸಮಾಜ ಸುಧಾರಣೆಯಾಗಬೇಕಾದರೆ ಪ್ರತಿಯೊಬ್ಬರಿಗೂ ದೈವೀಭಕ್ತಿ ಎಂಬ ಜ್ಞಾನದ ಬೆಳಕು ಬೇಕೇಬೇಕು.
ಪಂಚಾಂಗ ಶುಕ್ರವಾರ 29-12-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪುಷ್ಯ / ಯೋಗ: ವೈಧೃತಿ / ಕರಣ: ವಣಿಜ್
ಸೂರ್ಯೋದಯ : ಬೆ.06.40
ಸೂರ್ಯಾಸ್ತ : 06.03
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00
ರಾಶಿ ಭವಿಷ್ಯ
ಮೇಷ: ಮನೆಗೆ ಹೊಸ ಅತಿಥಿಯೊಬ್ಬರ ಸೇರ್ಪಡೆ ಯಾಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ.
ವೃಷಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮಿಥುನ: ಹೊಸ ವ್ಯವಹಾರವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಕಟಕ: ಸಮಯವನ್ನು ಸರಿಯಾಗಿ ಬಳಸಿಕೊಂಡು ಬುದ್ಧಿವಂತಿಕೆಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.
ಸಿಂಹ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ಕನ್ಯಾ: ಸ್ನೇಹಿತರಿಂದ ಅಚ್ಚರಿಯ ಉಡುಗೊರೆ ಸಿಗಲಿದೆ. ನಿರ್ಗತಿಕರಿಗೆ ಸಹಾಯ ಮಾಡಿ.
ತುಲಾ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉತ್ತಮ ದಿನ.
ವೃಶ್ಚಿಕ: ಮನೆಯಲ್ಲಿ ಮಂಗಳಕರ ಕಾರ್ಯಗಳನ್ನು ಮಾಡುವುದರಿಂದ ಮನಸ್ಸಿಗೆ ಸಂತೋಷ ಸಿಗಲಿದೆ.
ಧನುಸ್ಸು: ಸಾಲ ಮಾಡುವ ಮುನ್ನ ನಿಮ್ಮ ಸಾಮಥ್ರ್ಯ ಏನೆಂಬುದನ್ನು ತಿಳಿದು ಮುಂದೆ ಹೆಜ್ಜೆ ಇಟ್ಟರೆ ಒಳಿತು.
ಮಕರ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಕುಂಭ: ಅನೇಕ ಸಮಸ್ಯೆ ಗಳ ನಡುವೆಯೂ ವ್ಯಾಪಾರ ಕ್ಷೇತ್ರದಲ್ಲಿ ಮುಂದುವರಿಯುತ್ತೀರಿ.
ಮೀನ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.