Sunday, September 8, 2024
Homeಬೆಂಗಳೂರುಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ಬೆಂಗಳೂರಿನ ಇಂದಿನ ಕ್ರೈಂ ಸುದ್ದಿಗಳು

ಇಬ್ಬರು ವಿದೇಶಿ ಪ್ರಜೆಗಳ ಬಂಧನ, 6 ಕೋಟಿ ವೌಲ್ಯದ ಮಾದಕವಸ್ತು, 4 ಲಕ್ಷ ನಗದು ಜಪ್ತಿ

ಬೆಂಗಳೂರು,ಜು.26- ಬ್ಯುಸಿನೆಸ್‌‍ ವೀಸಾದಡಿ ಭಾರತಕ್ಕೆ ಬಂದು ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ಮುಂಬೈನಿಂದ ಮಾದಕವಸ್ತುಗಳನ್ನು ಸರಬರಾಜು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್‌ ಪೆಡ್ಲರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಹಾಗೂ 4.40 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಕೊಯಮತ್ತೂರಿನಲ್ಲಿ ವಾಸವಾಗಿದ್ದ ವಿದೇಶಿ ಪ್ರಜೆ: ವಿದೇಶಿ ಡ್ರಗ್‌ ಪೆಡ್ಲರ್‌ ಅನ್ನು ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟೆಲ್‌ಗಳನ್ನು ಮಾರಾಟ ಮಾಡುತ್ತಿದ್ದಾನೆಂಬ ಮಾಹಿತಿ ಆಧಾರದ ಮೇರೆಗೆ ಸಿಸಿಬಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ನಂತರ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡು ಡ್ರಗ್‌್ಸ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಒಬ್ಬ ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ.

ಆತನಿಂದ 6 ಕೋಟಿ ಮೌಲ್ಯದ 4 ಕೆ.ಜಿ ತೂಕದ ಎಂ.ಡಿ.ಎಂ.ಎ ಕ್ರಿಸ್ಟೆಲ್‌, ಎರಡು ಮೊಬೈಲ್‌ ೇನ್‌ಗಳು, ಒಂದು ಎಲೆಕ್ಟ್ರಾನಿಕ್‌ ತೂಕದ ಯಂತ್ರ ಮತ್ತು ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ವಿದೇಶಿ ಪ್ರಜೆಯಾಗಿದ್ದು, ಬಿಜಿನೆಸ್‌‍ ವೀಸಾದಡಿ ಭಾರತಕ್ಕೆ ಬಂದು, ತಮಿಳುನಾಡಿನ ಕೊಯಮತ್ತೂರಿನಲ್ಲಿ ವಾಸವಾಗಿದ್ದುಕೊಂಡು ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದನು. ವ್ಯಾಪಾರದಲ್ಲಿ ನಷ್ಟ ಉಂಟಾದ ಕಾರಣ ನಗರಕ್ಕೆ ಬಂದು, ಇಲ್ಲಿ ನೆಲೆಸಿರುವ ವಿದೇಶಿ ಮೂಲದ ಆತನ ಸ್ನೇಹಿತರುಗಳಿಂದ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಕಲಿತುಕೊಂಡಿದ್ದ.

ಮೋಜಿನ ಜೀವನ ನಡೆಸಲು ಮತ್ತು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಮುಂಬೈನಲ್ಲಿ ವಾಸವಾಗಿರುವ ಆತನ ಸ್ನೇಹಿತರುಗಳಿಂದ ಮಾದಕ ವಸ್ತುವಾದ ಎಂ.ಡಿ.ಎಂ.ಎ ಕ್ರಿಸ್ಟಲ್‌ ಅನ್ನು ಕಡಿಮೆ ಬೆಲೆಗೆ ಖರೀದಿ ಮಾಡಿ, ಬೆಂಗಳೂರಿಗೆ ತಂದು ಗ್ರಾಹಕರುಗಳಿಗೆ ಅಧಿಕ ಬೆಲೆಗೆ ಮಾರಾಟ ಮಾಡುತ್ತಾ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯು ಮಾದಕ ವಸ್ತುಗಳನ್ನು ಕುರ್ಕುರೆ ಕವರ್‌, ನೆಸ್ಟ್ಲೆ, ನೂಡಲ್ಸ್ ಸ ಪ್ಯಾಕೇಟ್‌ ಮತ್ತು ಸೋಪುಗಳ ಲೇಬಲ್‌ ಇರುವ ಪ್ಯಾಕಿಂಗ್‌ ಬಾಕ್ಸ್ ಸಗಳಲ್ಲಿ ಯಾರಿಗೂ ಅನುಮಾನ ಬಾರದಂತೆ ತಂದು ಕೊಡುತ್ತಿದ್ದ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ಸಹಚರನಾದ ಮತ್ತೊಬ್ಬ ಭಾರತದಲ್ಲಿ ಅನಧಿಕೃತವಾಗಿ ವಾಸವಾಗಿದ್ದು, ಆತನನ್ನು ಡಿಟೆಂಕ್ಷನ್‌ ಸೆಂಟರ್‌ಗೆ ಕಳುಹಿಸಲಾಗಿದೆ. 

ಡ್ರಗ್‌ ಪೆಡ್ಲಿಂಗ್‌ ಹಣದ ವಹಿವಾಟು ನಿರ್ವಹಣೆ : ಮಾದಕವಸ್ತುಗಳನ್ನು ಮಾರಾಟ ಮಾಡಿ ವಿದೇಶಿ ಡ್ರಗ್‌ ಪೆಡ್ಲರ್‌ನು ಅಕ್ರಮವಾಗಿ ಗಳಿಸಿದ್ದ ಸುಮಾರು 4.40 ಲಕ್ಷ ನಗದನ್ನು ಸಿಸಿಬಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಕಳೆದ ಮಾರ್ಚ್‌ ತಿಂಗಳಲ್ಲಿ ನಗರದ ಹೊರವಲಯದ ಸೋಲದೇವನಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯಲ್ಲಿ ಒಬ್ಬ ವಿದೇಶಿ ಡ್ರಗ್‌ ಪೆಡ್ಲರ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ ಸಿಸಿಬಿ ಅಧಿಕಾರಿಗಳು ಈತನು ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಗ್ರಾಹಕರಿಂದ ತನ್ನ ಸ್ನೇಹಿತರ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌, ಕೊತ್ತನೂರು ಬ್ರಾಂಚ್‌ನಲ್ಲಿ ಖಾತೆ ತೆರೆದು ಗೂಗಲ್‌ ಪೇ,  ಪೋನ್‌ ಪೇ ಮೂಲಕ ಡ್ರಗ್‌ ಪೆಡ್ಲಿಂಗ್‌ ಹಣದ ವಹಿವಾಟನ್ನು ನಿರ್ವಹಣೆ ಮಾಡುತ್ತಿದ್ದ ಬಗ್ಗೆ ತಿಳಿಸಿದ್ದಾನೆ.

ತನಿಖಾ ಕಾಲದಲ್ಲಿ ಈತನ ಬ್ಯಾಂಕ್‌ ಖಾತೆಗಳಲ್ಲಿದ್ದ ಒಟ್ಟು 90,797 ರೂ. ಮತ್ತು ಆತನ ಬಳಿಯಿದ್ದ 3,50,000 ಹಣವನ್ನು ವಶಪಡಿಸಿಕೊಂಡಿದ್ದು, ಈ ಹಣವು ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಗಳಿಸಿದ ಹಣವಾಗಿದ್ದರಿಂದ ಆ ಹಣವನ್ನು ಎನ್‌.ಡಿ.ಪಿ.ಎಸ್‌‍ ಕಾಯ್ದೆಯಡಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.  ಈ ಮುಟ್ಟುಗೋಲು ಪ್ರಕ್ರಿಯೆಯನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ.

ಕೇರಳ ವ್ಯಕ್ತಿ ಬಂಧನ :1.50 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು,ಜು.26- ಕೇರಳ ಮೂಲದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 1.50 ಕೋಟಿ ರೂ. ಮೌಲ್ಯದ ಮಾದಕ ವಸ್ತು ಕೊಕೇನ್‌ ಅನ್ನು ವಶಪಡಿಸಿಕೊಂಡಿದ್ದಾರೆ.

ವರ್ತೂರು ಪೊಲೀಸ್‌‍ ಠಾಣೆಯಲ್ಲಿ ಕೇರಳ ರಾಜ್ಯದ ವ್ಯಕ್ತಿ ವಿರುದ್ಧ ಎಂ.ಡಿ.ಎಂ.ಎ ಕ್ರಿಸ್ಟಲ್‌ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳದ ಎಸಿಪಿಯವರಿಗೆ ವಹಿಸಲಾಯಿತು.

ಈ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಆದೇಶ ಪಡೆದು ಆರೋಪಿಯನ್ನು ಐದು ದಿನಗಳ ಕಾಲ ತಮ ವಶಕ್ಕೆ ಪಡೆದು ಸುದೀರ್ಘ ವಿಚಾರಣೆಗೆ ಒಳಪಡಿಸಿದಾಗ ಆತ ಒಂದು ಮನೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ಕೊಕೇನ್‌ ಬಗ್ಗೆ ತಿಳಿಸಿದ್ದಾನೆ.

ಈತನ ಮಾಹಿತಿ ಮೇರೆಗೆ ಆರೋಪಿಯೊಂದಿಗೆ ಸಿಸಿಬಿ ಪೊಲೀಸರು ಆ ಮನೆಗೆ ಹೋಗಿ ತಪಾಸಣೆ ನಡೆಸಿ ಅಲ್ಲಿ ಸಂಗ್ರಹಿಸಿಡಲಾಗಿದ್ದ 746 ತೂಕದ ಕೊಕೇನ್‌ ವಶಪಡಿಸಿಕೊಂಡಿದ್ದು, ಇದರ ಮೌಲ್ಯ 1.50 ಕೋಟಿ ರೂ.ಗಳೆಂದು ಅಂದಾಜಿಸಿದ್ದಾರೆ.

ಮನೆಗಳ್ಳನ ಬಂಧನ: ಕೋಟಿ ವೌಲ್ಯದ ಚಿನ್ನಾಭರಣ ವಶ

ಬೆಂಗಳೂರು,ಜು.26- ಮನೆಗಳಲ್ಲಿ ಕಳ್ಳತನ ಮಾಡಿದ ಆಭರಣಗಳನ್ನು ಮುಂಬೈ, ಹೈದ್ರಾಬಾದ್‌, ಮೈಸೂರಿನ ಜ್ಯುವೆಲ್ಲರಿ ಅಂಗಡಿಗಳಲ್ಲಿ ಮಾರಾಟ ಮಾಡಿದ್ದ ಆರೋಪಿ ಯೊಬ್ಬನನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿ ಒಂದು ಕೋಟಿ ರೂ. ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿವಸ್ತು ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಚುಂಚಘಟ್ಟದಲ್ಲಿ ವಾಸವಿರುವ ವ್ಯಕ್ತಿಯೊಬ್ಬರು ಮನೆಗೆ ಬೀಗ ಹಾಕಿಕೊಂಡು ಅಂಗಡಿಗೆ ಹೋಗಿದ್ದು, ವಾಪಸ್‌‍ ರಾತ್ರಿ ಮನೆಗೆ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಮುಂಭಾಗದ ಬಾಗಿಲನ್ನು ಒಡೆದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ 300 ಗ್ರಾಂ ಚಿನ್ನಾಭರಣ ಹಾಗೂ 1.70 ಲಕ್ಷ ರೂ. ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ದೂರು ನೀಡಿದ್ದರು.

ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿ, ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌‍ ನಿಲ್ದಾಣದ ಬಳಿ ಆರೋಪಿಯನ್ನು ಕಾರು ಸಮೇತ ವಶಕ್ಕೆ ಪಡೆದು, ಠಾಣೆಗೆ ಕರೆತಂದು ವಿಚಾರಣೆ ಮಾಡಿದಾಗ ನಗರದ ವಿವಿಧೆಡೆ ಮನೆಗಳ್ಳತನ ಮಾಡಿರುವುದಾಗಿ ತಿಳಿಸಿದ್ದಾನೆ.

ಆರೋಪಿಯು ಕಳ್ಳತನ ಮಾಡಿದ ಒಡವೆಗಳನ್ನು ಮುಂಬೈ, ಹ್ಶೆದರಾಬಾದ್‌, ಮೈಸೂರು ಹಾಗೂ ನಗರದ ವಿವಿಧ ಪ್ರದೇಶಗಳಲ್ಲಿನ ಜ್ಯೂವೆಲರಿ ಶಾಪ್‌ಗಳಲ್ಲಿ ಮಾರಾಟ ಮಾಡಿದ್ದಾಗಿ ತಿಳಿಸಿದ್ದು, ಒಟ್ಟು   1 ಕೆ.ಜಿ 386 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ 1 ಕೆ.ಜಿ 500 ಗ್ರಾಂ ತೂಕದ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯ ಬಂಧನದಿಂದ ಒಟ್ಟು 26 ಕನ್ನಗಳವು ಪ್ರಕರಣಗಳು ಪತ್ತೆಯಾಗಿವೆ. ಕೋಣನಕುಂಟೆ ಠಾಣೆ ಇನ್ಸ್ ಸಪೆಕ್ಟರ್‌ ಪಾಪಣ್ಣ ಹಾಗೂ ಸಿಬ್ಬಂದಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಪ್ರವಾಸಕ್ಕೆ ಹೋಗಿದ್ದಾಗ ಮನೆ ಲೂಟಿ: ನಗನಾಣ್ಯ ಜಪ್ತಿ

ಬೆಂಗಳೂರು,ಜು.26- ಕುಟುಂಬ ಸಮೇತ ಪ್ರವಾಸಕ್ಕೆ ಹೋಗಿದ್ದಾಗ ಮನೆಯ ಕಿಟಕಿಯ ಗ್ರಿಲ್‌ ಕತ್ತರಿಸಿ ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳ್ಳತನ ಮಾಡಿ ಪಾಂಡಿಚೇರಿಯಲ್ಲಿ ಮಾರಾಟ ಮಾಡಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಹೆಚ್‌ಎಸ್‌‍ಆರ್‌ ಲೇಔಟ್‌ ಠಾಣೆ ಪೊಲೀಸರು ಬಂಧಿಸಿ 28 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಹೆಚ್‌ಎಸ್‌‍ಆರ್‌ ಲೇಔಟ್‌ ಒಂದನೇ ಸೆಕ್ಟರ್‌ನಲ್ಲಿ ವಾಸವಿರುವ ನಿವಾಸಿಯೊಬ್ಬರು ಪ್ರವಾಸಕ್ಕೆಂದು ಕುಟುಂಬ ಸಮೇತ ಮನೆಗೆ ಬೀಗ ಹಾಕಿಕೊಂಡು ಮೈಸೂರಿಗೆ ಹೋಗಿ ವಾಪಸ್‌‍ ಬಂದು ನೋಡಿದಾಗ ಯಾರೋ ಕಳ್ಳರು ಕಿಟಕಿಯ ಗ್ರಿಲ್‌ಗಳನ್ನು ಕಟ್‌ಮಾಡಿ, ಮನೆಯ ಒಳಗೆ ಪ್ರವೇಶಿಸಿ, ಸುಮಾರು 430 ಗ್ರಾಂ ತೂಕದ ಚಿನ್ನಾಭರಣ ಮತ್ತು 250 ಗ್ರಾಂ ತೂಕದ ಬೆಳ್ಳಿಯ ವಸ್ತುಗಳನ್ನು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಹೆಚ್‌.ಎಸ್‌‍.ಆರ್‌ ಲೇಔಟ್‌ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಮಾಹಿತಿಯನ್ನು ಕಲೆಹಾಕಿ, ಪಾಂಡಿಚೇರಿಯ ಕಡಲೂರಿನಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದು, ವಿಚಾರಣೆಗೆ ಒಳಪಡಿಸಿದಾಗ ಮನೆಗಳ್ಳತನ ಮಾಡರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ತನಿಖೆಯನ್ನು ಮುಂದುವರೆಸಿ, ಆರೋಪಿಗಳ ಮನೆಯಿಂದ 188 ಗ್ರಾಂ ಚಿನ್ನ, 1 ಕೆ.ಜಿ ಬೆಳ್ಳಿಯ ವಸ್ತುಗಳು ಹಾಗೂ ಆರೋಪಿಗಳು ಪಾಂಡಿಚೇರಿಯ ಜ್ಯೂವೆಲರಿ ಶಾಪ್‌ಗಳಲ್ಲಿ ಮಾರಾಟ ಮಾಡಿದ್ದ 200 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಯಿತು.

ಒಟ್ಟು 388 ಗ್ರಾಂ ತೂಕದ ಚಿನ್ನಾಭರಣಗಳು ಮತ್ತು 1 ಕೆ.ಜಿ ಬೆಳ್ಳಿಯ ವಸ್ತುಗಳು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿ-ಚಕ್ರ ವಾಹನವನ್ನು ವಶಪಡಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 28 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ.    ಇನ್ಸ್ ಸಪೆಕ್ಟರ್‌ ಹರೀಶ್‌ ಕುಮಾರ್‌ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ವೀಲ್ಹಿಂಗ್‌:  ಸವಾರರ ವಿರುದ್ಧ ಎಫ್‌ಐಆರ್‌

ಬೆಂಗಳೂರು,ಜು.26- ಇಬ್ಬರು ಸವಾರರು ವೀಲ್ಹಿಂಗ್‌ ಮಾಡುತ್ತಿದ್ದಾಗ ಗಸ್ತಿನಲ್ಲಿದ್ದ ಕೆ.ಆರ್‌.ಪುರ ಸಂಚಾರ ಠಾಣೆ ಪೊಲೀಸರು ವಾಹನಗಳ ಸಮೇತ ಜಪ್ತಿ ಮಾಡಿ ಸವಾರರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.ವೀಲ್ಹಿಂಗ್‌ ಮಾಡುವವರನ್ನು ಪತ್ತೆಹಚ್ಚಲು ವಿಶೇಷ ಕಾರ್ಯಾಚರಣೆ ಕೈಗೊಂಡು ಠಾಣೆ ವ್ಯಾಪ್ತಿಯ ಮೇಡಹಳ್ಳಿ ಬಳಿ ಮತ್ತು ಹಳೇ ಮದ್ರಾಸ್‌‍ ರಸ್ತೆಯಲ್ಲಿ ಸಿಬ್ಬಂದಿ ಗಸ್ತಿನಲ್ಲಿದ್ದರು.

ಆ ಸಂದರ್ಭದಲ್ಲಿ ಇಬ್ಬರು ಸವಾರರು ಹಾಗೂ  ಎರಡು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿ, ವಿಚಾರಣೆಗೊಳಪಡಿಸಿ ಎರಡು ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿಕೊಂಡು ಕಾನೂನು ರೀತಿ ಕ್ರಮ  ಕೈಗೊಂಡಿದ್ದಾರೆ ಎಂದು ಪೂರ್ವ ಸಂಚಾರ ವಿಭಾಗದ ಉಪ ಪೊಲೀಸ್‌‍ ಆಯುಕ್ತ ಕುಲದೀಪ್‌ಕುಮಾರ್‌ ಆರ್‌.ಜೈನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಬ್ಬರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ

ಬೆಂಗಳೂರು,ಜು.26- ಕಾನೂನು ಬಾಹಿರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿ ಶೀಟರ್‌ಗಳನ್ನು ಗೂಂಡಾ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ. ಬಸವೇಶ್ವರ ನಗರ ಪೊಲೀಸ್‌‍ ಠಾಣೆ ಮತ್ತು ಸಿಸಿಬಿ ಅಧಿಕಾರಿಗಳು ಕರ್ನಾಟಕ ಅಕ್ರಮ ಭಟ್ಟಿ, ಸಾರಾಯಿ, ವ್ಯವಹಾರ, ಔಷಧಾಪರಾಧ, ಜೂಜುಕೋರ, ಗೂಂಡಾ, ಅನೈತಿಕ ವ್ಯವಹಾರಗಳ ಅಪರಾಧ ಮತ್ತು ಕೊಳಚೆ ಪ್ರದೇಶಗಳನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳುವ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧನದಲ್ಲಿರಿಸಲು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಅನುಮೋದಿಸಿ ಬಂಧನದ ಆದೇಶ ಹೊರಡಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ಗೂಂಡಾ ಕಾಯ್ದೆಯಡಿಯಲ್ಲಿ ಈ ಇಬ್ಬರು ರೌಡಿಶೀಟರ್‌ ವಿರುದ್ಧ ಬಂಧನದ ಆದೇಶ ಹೊರಡಿಸಲಾಗಿದೆ.

RELATED ARTICLES

Latest News