Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-03-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-03-2024)

ನಿತ್ಯ ನೀತಿ :
ಜೀವನದಲ್ಲಿ ಎಲ್ಲ ರೀತಿಯ ಪಾಠವನ್ನು ಕಲಿಯುತ್ತೇನೆ. ಆದರೆ ಯಾರನ್ನು ನಂಬಬೇಕು, ಯಾರನ್ನು ನಂಬಬಾರದು ಅನ್ನೋದನ್ನು ಕೊನೆವರೆಗೂ ಕಲಿಯುವುದಿಲ್ಲ.

ಪಂಚಾಂಗ : ಶುಕ್ರವಾರ, 01-03-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಕೃಷ್ಣ ಪಕ್ಷ
ತಿಥಿ: ಷಷ್ಠಿ / ನಕ್ಷತ್ರ: ಸ್ವಾತಿ / ಯೋಗ: ಧ್ರುವ / ಕರಣ: ಗರಜೆ

ಸೂರ್ಯೋದಯ : ಬೆ.06.35
ಸೂರ್ಯಾಸ್ತ : 06.29
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ಇಂದಿನ ರಾಶಿಭವಿಷ್ಯ :
ಮೇಷ
: ಮಿತ್ರರಲ್ಲಿ ಕಂಡುಬರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.
ವೃಷಭ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ. ಅತ್ಯಂತ ಎಚ್ಚರಿಕೆ ವಹಿಸಿ.
ಮಿಥುನ: ವಾಹನ ಚಾಲಕರು ಅತ್ಯಂತ ಎಚ್ಚರಿಕೆ ಯಿಂದ ಇರಬೇಕಾದ ದಿನ.

ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಸಿಂಹ: ನೀವು ಯೋಚಿಸಿ ದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.
ಕನ್ಯಾ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.

ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.
ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.
ಧನುಸ್ಸು: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.

ಮಕರ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.
ಕುಂಭ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಮೀನ: ಅತಿಯಾದ ಮಾತಿನಿಂದ ಉತ್ತಮ ಅವಕಾಶವನ್ನು ಕಳೆದುಕೊಳ್ಳಬೇಕಾದಿತು.

RELATED ARTICLES

Latest News