Wednesday, May 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(01-05-2024)

ನಿತ್ಯ ನೀತಿ : ನಾಟಕೀಯವಾದ ಭರವಸೆಗಳಿಗಿಂತ ಪ್ರಾಮಾಣಿಕವಾದ ತಿರಸ್ಕಾರವೇ ಉತ್ತಮ.
ಪಂಚಾಂಗ : ಬುಧವಾರ, 01-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಶ್ರವಣ / ಯೋಗ: ಶುಭ / ಕರಣ: ಬಲವ

ಸೂರ್ಯೋದಯ : ಬೆ.05.59
ಸೂರ್ಯಾಸ್ತ : 06.35
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ವೃಷಭ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಮಿಥುನ: ಖರ್ಚು-ವೆಚ್ಚಗಳನ್ನು ನಿಯಂತ್ರಣದಲ್ಲಿ ಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.

ಕಟಕ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಸಿಂಹ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ಕನ್ಯಾ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.

ತುಲಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಫಲವಾದರೆ ತೊಂದರೆಯಾಗಬಹುದು.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.

ಮಕರ: ಮನಸ್ತಾಪ ತಪ್ಪಿಸಲು ಸಹೋದರರೊಂದಿಗೆ ಅತ್ಯಂತ ಜಾಣ್ಮೆಯಿಂದ ವ್ಯವಹರಿಸುವುದು ಒಳಿತು.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ವಾಹನ ಖರೀದಿಸುವ ಸಾಧ್ಯತೆ ಇದೆ.

RELATED ARTICLES

Latest News