Saturday, July 27, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-06-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-06-2024)

ನಿತ್ಯ ನೀತಿ : ನೀನು ದೇವರನ್ನು ಕುರಿತು ಪೂಜೆ ಮಾಡಿದರೆ ದೇವರು ಒಲಿಯುವುದಿಲ್ಲ. ನಿನ್ನ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ನಿನಗೆ ದೇವರು ಒಲಿಯುತ್ತಾನೆ.ನಿನ್ನ ಕಾಯಕ ನಿರಂತರವಾಗಿರಲಿ.

ಪಂಚಾಂಗ : ಶನಿವಾರ, 01-06-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಕೃಷ್ಣ ಪಕ್ಷ
ತಿಥಿ: ನವಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಪ್ರೀತಿ / ಕರಣ: ವಣಿಜ್‌

ಸೂರ್ಯೋದಯ – ಬೆ.05.52
ಸೂರ್ಯಾಸ್ತ – 06.43
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಒಳಿತು. ಸಂಗಾತಿಯೊಂದಿಗೆ ಪ್ರವಾಸ ಕೈಗೊಳ್ಳುವಿರಿ.
ವೃಷಭ: ಒತ್ತಡದ ಜೀವನದಿಂದ ಹೊರಬರುವಿರಿ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಬೇಡಿ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತ ಗಳಿಂದ ಕೂಡಿರುತ್ತವೆ.

ಕಟಕ: ಖರ್ಚುಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯವಾಗಿರುತ್ತದೆ.
ಸಿಂಹ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಕನ್ಯಾ: ರಕ್ತ ಸಂಬಂಧಿ ಗಳ ವಿರೋಧ ಎದುರಿಸ ಬೇಕಾಗುತ್ತದೆ.

ತುಲಾ: ಹಿರಿಯ ಸಹೋದರ ಮತ್ತು ಸಹೋದರಿಯ ರೊಂದಿಗಿನ ಸಂಬಂಧವು ಬಲವಾಗಿರುತ್ತದೆ.
ವೃಶ್ಚಿಕ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಧನುಸ್ಸು: ಕೆಲವು ದಿನಗಳಿಂದ ಅನುಭವಿಸುತ್ತಿದ್ದ ಸಂಕಷ್ಟಗಳಿಗೆ ಮುಕ್ತಿ ದೊರೆಯಲಿದೆ.

ಮಕರ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ಕುಂಭ: ದಿನವಿಡೀ ಬಿಡುವಿಲ್ಲದ ಕಾರ್ಯಗಳ ನಡುವೆ ಮಕ್ಕಳೊಂದಿಗೆ ಸಮಯ ಕಳೆಯಲು ಪ್ರಯತ್ನಿಸಿ.
ಮೀನ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆ ಒಳಗಾಗಬಹುದು.

RELATED ARTICLES

Latest News