ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-03-2022)

Social Share

ನಿತ್ಯನೀತಿ : ಸಿಗದವರನ್ನು ಹುಡುಕಬೇಡಿ. ಸಿಕ್ಕಿದವರನ್ನು ಬಿಡಬೇಡಿ.
ಬರದವರನ್ನು ಕಾಯಬೇಡಿ.
ಬಂದವರನ್ನು ಕಾಯಿಸಬೇಡಿ.
ಕೊಡದವರನ್ನು ಕೇಳಬೇಡಿ. ಕೊಟ್ಟವರನ್ನು ಮರೆಯಬೇಡಿ.
ಪಂಚಾಂಗ : ಗುರುವಾರ , 03-03-2022
ಪ್ಲವನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಮಾಘ ಮಾಸ / ಶುಕ್ಲ  ಪಕ್ಷ / ತಿಥಿ: ಪ್ರತಿಪದ್/ ನಕ್ಷತ್ರ: ಪೂರ್ವಾಭಾದ್ರ/ ಮಳೆ ನಕ್ಷತ್ರ: ಶತಭಿಷ
* ಸೂರ್ಯೋದಯ : ಬೆ.06.35
* ಸೂರ್ಯಾಸ್ತ : 06.29
* ರಾಹುಕಾಲ : 1.30-3.00
* ಯಮಗಂಡ ಕಾಲ : 6.00-7.30
* ಗುಳಿಕ ಕಾಲ : 9.00-10.30
# ರಾಶಿಭವಿಷ್ಯ :
ಮೇಷ: ಸಂಗಾತಿಯೊಂದಿಗೆ ಹಣಕಾಸಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಿರಿ.
ವೃಷಭ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿ ವರ್ಗಕ್ಕೆ ಹತ್ತಿರವಾಗಿರುವುದರಿಂದ ಬಡ್ತಿ ಮತ್ತು ವೇತನ ಹೆಚ್ಚಳದ ರೂಪದಲ್ಲಿ ಲಾಭ ದೊರೆಯಲಿದೆ.
ಕಟಕ: ಆದಾಯ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಚರ ಮತ್ತು ಸ್ಥಿರ ಆಸ್ತಿಯಲ್ಲಿಯೂ ಹೆಚ್ಚಳ ಕಂಡುಬರಲಿದೆ.
ಸಿಂಹ: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆಒಳಗಾಗಬಹುದು.
ಕನ್ಯಾ: ಪ್ರತಿಯೊಂದು ಕೆಲಸ ವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ.
ತುಲಾ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಉತ್ತಮ ಅವಕಾಶಗಳು ದೊರೆಯಲಿವೆ.
ವೃಶ್ಚಿಕ: ಖಾಸಗಿ ಉದ್ಯೋಗದಲ್ಲಿರುವವರಿಗೆ ಒಳ್ಳೆಯ ಒಳ್ಳೆಯ ಸುದ್ದಿ ಸಿಗಲಿದೆ. ಸಾಕಷ್ಟು ಸಮಸ್ಯೆಗಳು ಪರಿಹಾರವಾಗಲಿವೆ.
ಧನುಸ್ಸು: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
ಮಕರ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿತ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ.
ಕುಂಭ: ಜವಾಬ್ದಾರಿಗಳನ್ನು ಪೂರೈಸಿ. ಖಂಡಿತ ವಾಗಿಯೂ ಉನ್ನತ ಮಟ್ಟಕ್ಕೆ ಏರುವಿರಿ.
ಮೀನ: ಅತ್ತೆ ಕಡೆಯಿಂದ ಮಾನಸಿಕ ಒತ್ತಡ, ಕಿರುಕುಳ ಎದುರಿಸಬೇಕಾಗಬಹುದು.

Articles You Might Like

Share This Article