ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-03-2022)

Social Share

ನಿತ್ಯನೀತಿ : ಪ್ರಯತ್ನ ಮಾಡಿ ಸೋಲಬಹುದು. ಆದರೆ ಪ್ರಾರ್ಥನೆ ಮಾಡಿ ಸೋಲಲು ಸಾಧ್ಯವಿಲ್ಲ.
ಪಂಚಾಂಗ : ಶುಕ್ರವಾರ, 04-03-2022
ಪ್ಲವನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ  ಪಕ್ಷ / ತಿಥಿ: ದ್ವಿತೀಯಾ/ ನಕ್ಷತ್ರ: ಪೂರ್ವಾಭಾದ್ರ/ ಮಳೆ ನಕ್ಷತ್ರ: ಶತಭಿಷ
* ಸೂರ್ಯೋದಯ : ಬೆ.06.34
* ಸೂರ್ಯಾಸ್ತ : 06.29
* ರಾಹುಕಾಲ : 1.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-9.00
# ರಾಶಿಭವಿಷ್ಯ :
ಮೇಷ: ಅನಗತ್ಯ ಅತಿಥಿಗಳ ಆಗಮನದಿಂದ ವಿದ್ಯಾರ್ಥಿ ಗಳು ವ್ಯರ್ಥವಾಗಿ ಕಾಲ ಕಳೆಯುವ ಸಾಧ್ಯತೆಗಳಿವೆ.
ವೃಷಭ: ಸೇವಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಾಪಾರ ಮಾಡುವವರು ವಿಶೇಷ ಲಾಭ ಪಡೆಯುವರು.
ಮಿಥುನ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉತ್ತಮ ದಿನ.
ಕಟಕ: ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಲು ಪ್ರಯತ್ನಿಸಿ.
ಸಿಂಹ: ಕುಟುಂಬದ ಹಿರಿಯರಿಗೆ ಪ್ರಾಮುಖ್ಯತೆ ನೀಡಿ. ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.
ಕನ್ಯಾ: ಹಿಂದಿನ ಕಠಿಣ ಪರಿಶ್ರಮ ಫಲ ನೀಡುತ್ತದೆ. ಸಾಲ ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುವಿರಿ.
ತುಲಾ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ವೃಶ್ಚಿಕ: ವ್ಯವಹಾರದಲ್ಲಿ ಏಕಕಾಲದಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸುವುದು ಒಳಿತು.
ಧನುಸ್ಸು: ಮನೆಯ ಸದಸ್ಯರಿಂದ ದೂರ ಹೋಗು ವಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಮಕರ: ವೈವಾಹಿಕ ಜೀವನದಲ್ಲಿನ ಸಮಸ್ಯೆಗಳು ಪರಿಹಾರವಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ಕುಂಭ: ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ.
ಮೀನ: ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಹಲವು ಬಾರಿ ಯೋಚಿಸಿ.

Articles You Might Like

Share This Article