Saturday, May 18, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-05-2024)

ನಿತ್ಯ ನೀತಿ : ನೀನು ದೇವರನ್ನು ಕುರಿತು ಪೂಜೆ ಮಾಡಿದರೆ ದೇವರು ಒಲಿಯುವುದಿಲ್ಲ. ನಿನ್ನ ಕೆಲಸವನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ನಿನಗೆ ದೇವರು ಒಲಿಯುತ್ತಾನೆ. ನಿನ್ನ ಕಾಯಕ ನಿರಂತರವಾಗಿರಲಿ.

ಪಂಚಾಂಗ : ಶನಿವಾರ, 04-05-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಐಂದ್ರ / ಕರಣ: ಭವ

ಸೂರ್ಯೋದಯ : ಬೆ.05.58
ಸೂರ್ಯಾಸ್ತ : 06.35
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿಭವಿಷ್ಯ :
ಮೇಷ
: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.

ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.

ಮಕರ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.

RELATED ARTICLES

Latest News