Monday, January 13, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-12-2024)

Today's Horoscope

ನಿತ್ಯ ನೀತಿ : ನಾಲ್ಕು ದಿನ ದೂರ ಹೋಗಿ ನೋಡಿ ಜನ ನಿಮನ್ನು ಮರೆತೇ ಬಿಡ್ತಾರೆ. ಜೀವನವಿಡೀ ಮನುಷ್ಯ ತಾನು ಎಲ್ಲರಿಗೂ ಬೇಕಾದವನು ಅನ್ನೋ ಭ್ರಮೇಲಿ ಇರ್ತಾನೆ. ಆದರೆ ನಿಜ ಏನು ಅಂದ್ರೆ ಜನರಿಗೆ ನೀವು ಇದ್ದರೂ, ಇಲ್ಲದಿದ್ದರೂ ಏನೂ ವ್ಯತ್ಯಾಸ ಆಗುವುದಿಲ್ಲ. ನಿಮ ಅವಶ್ಯಕತೆ ಇದ್ದಾಗ ಮಾತ್ರ ನಿಮನ್ನು ನೆನಪಿಸಿಕೊಳ್ಳುತ್ತಾರೆ. ಅದಕ್ಕೆ ನೀವು ನಿಮಗೋಸ್ಕರ ಬದುಕಿ.

ಪಂಚಾಂಗ : ಬುಧವಾರ 04-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಷಾಢ / ಯೋಗ: ಗಂಡ / ಕರಣ: ವಣಿಜ್

ಸೂರ್ಯೋದಯ – ಬೆ.06.28
ಸೂರ್ಯಾಸ್ತ – 05.52
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.

ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.

ಮಕರ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.

RELATED ARTICLES

Latest News