ನಿತ್ಯ ನೀತಿ : ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ.
# ಪಂಚಾಂಗ : ಶನಿವಾರ , 05-02-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಹೇಮಂತ ಋತು | ಪುಷ್ಯ ಮಾಸ | ಕೃಷ್ಣ ಪಕ್ಷ | ತಿಥಿ: ಪಂಚಮಿ| ನಕ್ಷತ್ರ: ಉತ್ತರಾಭಾದ್ರ| ಮಳೆ ನಕ್ಷತ್ರ: ಶ್ರವಣ
* ಸೂರ್ಯೋದಯ : ಬೆ.06.46
* ಸೂರ್ಯಾಸ್ತ : 06.22
* ರಾಹುಕಾಲ : 9.00-10.30
* ಯಮಗಂಡ ಕಾಲ : 1.30-3.00
* ಗುಳಿಕ ಕಾಲ : 6.00-7.30
# ರಾಶಿಭವಿಷ್ಯ
ಮೇಷ: ದೊಡ್ಡ ತೊಂದರೆಯಲ್ಲಿ ಸಿಲುಕಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ತಪ್ಪು ಕೆಲಸಗಳನ್ನು ಮಾಡುವುದನ್ನು ತಪ್ಪಿಸಿ.
ವೃಷಭ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಉತ್ತಮ ದಿನ.
ಮಿಥುನ: ಸಮಯವನ್ನು ಸರಿಯಾಗಿ ಬಳಸಿಕೊಂಡು ಕಾರ್ಯ ಸಾಮಥ್ರ್ಯವನ್ನು ಅರ್ಥಮಾಡಿಕೊಂಡು ಆದಾಯ ಹೆಚ್ಚಿಸುವಂತಹ ಕೆಲಸ ಮಾಡಬಹುದು.
ಕಟಕ: ಏಕಕಾಲದಲ್ಲಿ ಹೂಡಿಕೆ ಮಾಡುವುದನ್ನು ತಪ್ಪಿಸಿ ಮತ್ತು ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಬೇಕಾಗುತ್ತದೆ.
ಸಿಂಹ: ವೃತ್ತಿಜೀವನಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗುವಿರಿ.
ಕನ್ಯಾ: ಹಿಂದಿನ ಕಠಿಣ ಪರಿಶ್ರಮ ಫಲ ನೀಡು ತ್ತದೆ. ಸಾಲ ಮರುಪಾವತಿ ಮಾಡುವಲ್ಲಿ ಯಶಸ್ವಿಯಾಗುವಿರಿ.
ತುಲಾ: ಕಚೇರಿಯಲ್ಲಿ ಕೆಲಸ ಮಾಡಲು ಮನಸ್ಸಾಗುವುದಿಲ್ಲ. ವೃತ್ತಿಜೀವನದಲ್ಲಿ ಕೆಲವು ಸಂದಿಗ್ಧ ಪರಿಸ್ಥಿತಿಗಳು ಎದುರಾಗಲಿವೆ.
ವೃಶ್ಚಿಕ: ವಿದ್ಯಾರ್ಥಿಗಳು ಸಾಧ್ಯವಾದರೆ ಸ್ನೇಹಿತರೊಂದಿಗೆ ಅಧ್ಯಯನ ಮಾಡಿ. ಇಲ್ಲದಿದ್ದರೆ ಮುಂಬರುವ ಪರೀಕ್ಷೆ ಯಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ.
ಧನುಸ್ಸು: ಮನೆಯ ಸದಸ್ಯರಿಂದ ದೂರ ಹೋಗು ವಂತಹ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಗಳಿವೆ.
ಮಕರ: ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಕುಂಭ: ಕಠಿಣ ಪರಿಶ್ರಮ ಪಡುವುದರಿಂದ ಮಾತ್ರ ನಿಮಗೆ ಯಶಸ್ಸು ದೊರೆಯಲಿದೆ.
ಮೀನ: ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಹಲವು ಬಾರಿ ಯೋಚಿಸಿ.
