ನಿತ್ಯ ನೀತಿ : ನಮಗೆ ಬೇಕಾದಲ್ಲಿ ಬೆರೆತು ನಡೆಯೋಣ. ಸಾಕಾದಲ್ಲಿ ಸರಿದು ನಡೆಯೋಣ. ಎರಡೂ ಬೇಡವಾದಲ್ಲಿ ನಮ ಪಾಡಿಗೆ ನಾವು ಯಾರ ಮನಸ್ಸೂ ನೋಯಿಸದೆ ಸುಮನೆ ಇರೋಣ.
ಪಂಚಾಂಗ : ಸೋಮವಾರ, 05-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಆಶ್ಲೇಷಾ / ಯೋಗ: ವ್ಯತೀಪಾತ /ಕರಣ: ಬಾಲವ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.45
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಅನಗತ್ಯ ವಿಷಯಗಳ ಬಗ್ಗೆ ಚರ್ಚೆ ನಡೆಸು ವುದು ಬೇಡ. ದಾನ-ಧರ್ಮಗಳಲ್ಲಿ ಆಸಕ್ತಿ ತೋರುವಿರಿ.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಮಕರ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.