Tuesday, September 17, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-09-2024)

Horoscope

ನಿತ್ಯ ನೀತಿ : ಒಬ್ಬರ ಸರಳ ಸ್ವಭಾವ ಅವರ ಬಲಹೀನತೆ ಅಲ್ಲ. ಪ್ರಪಂಚದಲ್ಲಿ ನೀರಿಗಿಂತ ಸರಳ ಯಾವುದೂ ಇಲ್ಲ. ಆದರೆ, ಅದರ ರಭಸಕ್ಕೆ ಎಲ್ಲವನ್ನೂ ಗೆಲ್ಲುವ ಸಾಮರ್ಥ್ಯವಿದೆ.

ಪಂಚಾಂಗ : ಗುರುವಾರ , 05-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ /ತಿಥಿ: ದ್ವಿತೀಯಾ / ನಕ್ಷತ್ರ: ಉತ್ತರಾಭಾದ್ರ / ಯೋಗ: ಶುಭ / ಕರಣ: ತೈತಿಲ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.28
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಕಾರ್ಯ ಸಾಮರ್ಥ್ಯವನ್ನು ಅರ್ಥಮಾಡಿ ಕೊಂಡು ಆದಾಯ ಹೆಚ್ಚಿಸುವ ಕೆಲಸ ಮಾಡಿ.
ವೃಷಭ: ಪ್ರಯತ್ನವಿದ್ದಲ್ಲಿ ಆದಾಯ ಸಿಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ.
ಮಿಥುನ: ಉಪನ್ಯಾಸಕರಿಗೆ ಶುಭ ದಿನ. ಕಲಾವಿದರಿಗೆ ಅವಕಾಶ ಕೈ ತಪ್ಪುವ ಸಾಧ್ಯತೆ ಇದೆ.

ಕಟಕ: ವಸಾ್ತ್ರಭರಣ ಖರೀದಿಸುವ ಸಾಧ್ಯತೆ ಇದೆ.
ಸಿಂಹ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ಕನ್ಯಾ: ಉನ್ನತ ಅಧಿ ಕಾರಿಗಳು ನಿಮ್ಮ ಮೇಲೆ ಕೋಪಗೊಳ್ಳು ವರು. ಎಚ್ಚರಿಕೆಯಿಂದಿರಿ.

ತುಲಾ: ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆ ಯಾಗುವುದು.
ವೃಶ್ಚಿಕ: ಉದ್ಯೋಗ ಬದಲಾವಣೆಗೆ ಉತ್ತಮ ಸಮಯ ಮತ್ತು ಹೊಸ ಅವಕಾಶಗಳು ಸಿಗಲಿವೆ.
ಧನುಸ್ಸು: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.

ಮಕರ: ಯೋಚಿಸುವ ಪ್ರತಿಯೊಂದು ಕೆಲಸ- ಕಾರ್ಯಗಳು ವಿಳಂಬ ರೀತಿಯಲ್ಲಿ ನಡೆಯಲಿವೆ.
ಕುಂಭ: ಉನ್ನತ ಮಟ್ಟದಲ್ಲಿ ಕಾರ್ಯನಿರ್ವ ಹಿಸುವವರಿಗೆ ಜನಸಾಮಾನ್ಯರಿಂದ ಉತ್ತಮ ಪ್ರೋತ್ಸಾಹ ದೊರೆಯಲಿದೆ.
ಮೀನ: ಉದ್ಯಮಿಗಳು ಹೊಸ ಶಾಖೆ ತೆರೆಯಲು ಬೇಕಾದ ಅನುಕೂಲಗಳು ಒದಗುತ್ತವೆ.

RELATED ARTICLES

Latest News