Tuesday, July 16, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (06-07-2024)

ನಿತ್ಯ ನೀತಿ :
ನಾಯಕತ್ವ , ಕೀರ್ತಿ, ಸಂಪತ್ತು ಮತ್ತು ಸೌಂದರ್ಯ ಜೀವನದ ತಾತ್ಕಾಲಿಕ ಹಂತಗಳು. ಆದರೆ, ನಮ ನಡವಳಿಕೆಯಿಂದ ರೂಪುಗೊಂಡ ವ್ಯಕ್ತಿತ್ವದ ಶ್ರೀಮಂತಿಕೆಯು ಕಲ್ಲಿನ ಮೇಲೆ ಕೆತ್ತಿದ ಶಿಲ್ಪದಂತೆ ಅಖಂಡವಾಗಿ ಮತ್ತು ಅಮರವಾಗಿ ಉಳಿಯುತ್ತದೆ.

ಪಂಚಾಂಗ : ಶನಿವಾರ , 06-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಪುನರ್ವಸು / ಯೋಗ: ವ್ಯಾಘಾತ / ಕರಣ: ಕಿಂಸ್ತುಘ್ನ

ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ವೃಷಭ: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆಗಳ ಬಗ್ಗೆ ತಿಳಿದುಕೊಳ್ಳುವುದು ಒಳಿತು.

ಕಟಕ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ.
ವೃಶ್ಚಿಕ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

RELATED ARTICLES

Latest News