ನಿತ್ಯ ನೀತಿ : ಸಮುದ್ರದ ಮೇಲೆ ಬಿದ್ದ ಮಳೆ, ಹೊಟ್ಟೆ ತುಂಬಿದ ಮೇಲೆ ನೀಡಿದ ಊಟ, ಸಿರಿವಂತರಿಗೆ ನೀಡಿದ ಉಡುಗೊರೆ, ನಡು ಹಗಲಿನಲ್ಲಿ ಹಚ್ಚಿದ ದೀಪ, ನಿಯತ್ತು ಇಲ್ಲದವರಿಗೆ ತೋರಿದ ಪ್ರೀತಿ ಎಲ್ಲವೂ ವ್ಯರ್ಥ.
ಪಂಚಾಂಗ : ಭಾನುವಾರ, 06-07-2025
ವಿಶ್ವಾವಸುನಾಮ ಸಂವತ್ಸರ / ಉತ್ತರಾಯಣ / ಸೌರ ವರ್ಷ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ವಿಶಾಖಾ / ಯೋಗ: ಸಾಧ್ಯ / ಕರಣ: ವಣಿಜ್
ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲಕರ ದಿನ. ಸದೃಢ ಆರೋಗ್ಯದಿಂದ ನೆಮದಿ ಸಿಗಲಿದೆ.
ವೃಷಭ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ಮಿಥುನ: ವಿದ್ಯಾರ್ಥಿಗಳಿಗೆ ಶುಭದಾಯಕ ದಿನ.
ಕಟಕ: ವೈಯಕ್ತಿಕ ವಿಷಯಗಳ ಬಗ್ಗೆ ಗಮನವಿರಲಿ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.
ತುಲಾ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ಮಕರ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕುಂಭ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಮೀನ: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
- ಶಿವಮೊಗ್ಗದಲ್ಲಿ ಗಣೇಶ ಮೂರ್ತಿಗೆ ಕಾಲಿನಿಂದ ಒದ್ದು, ನಾಗನ ವಿಗ್ರಹ ಚರಂಡಿಗೆಸೆದು ವಿಕೃತಿ ಮೆರೆದ ಕಿಡಿಗೇಡಿಗಳು : ಭಾರಿ ಆಕ್ರೋಶ
- ನಿವೃತ್ತ CJI ಚಂದ್ರಚೂಡ್ ವಾಸವಿರುವ ನಿವಾಸವನ್ನು ತಕ್ಷಣವೇ ನಿವಾಸ ಖಾಲಿ ಮಾಡಿಸುವಂತೆ ಕೇಂದ್ರಕ್ಕೆ ಸುಪ್ರೀಂ ಪತ್ರ
- ಇಸ್ರೇಲ್-ಇರಾನ್ ಯುದ್ಧದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿ ಖಮೇನಿ
- ದಲೈಲಾಮಾ ಅವರ 90ನೇ ಹುಟ್ಟುಹಬ್ಬ : ಶುಭಾಶಯ ಕೋರಿದ ಪ್ರಧಾನಿ ಮೋದಿ
- ತುಮಕೂರು : ಖಾಸಗಿ ಹೋಟೆಲ್ನಲ್ಲಿ ದಾವಣಗೆರೆಯ ಪಿಎಸ್ಐ ಆತ್ಮಹತ್ಯೆ