ನಿತ್ಯ ನೀತಿ : ಪ್ರತಿಯೊಂದು ಗೆಳೆತನದ ಹಿಂದೆಯೂ ಸ್ವಲ್ಪವಾದರೂ ಸ್ವ ಹಿತಾಸಕ್ತಿ ಇದ್ದೇ ಇರುತ್ತದೆ. ಅದಿಲ್ಲದ ಗೆಳೆತನವೇ ಇಲ್ಲ. ಇದು ಕಟುಸತ್ಯ.
ಪಂಚಾಂಗ : ಭಾನುವಾರ , 06-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ವಿಶಾಖಾ / ಯೋಗ: ಪ್ರೀತಿ / ಕರಣ: ವಣಿಜ್
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.06
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ವೃಷಭ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಮಿಥುನ: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ಕಟಕ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಸಿಂಹ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಧನುಸ್ಸು:ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುವುದಿಲ್ಲ.
ಮಕರ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.
ಕುಂಭ: ಸೋದರ ಸಂಬಂಧಿ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
ಮೀನ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.