Saturday, October 5, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-07-2024)

ನಿತ್ಯ ನೀತಿ : ಒಬ್ಬರನ್ನು ಸೋಲಿಸುವುದು ಸುಲಭ. ಆದರೆ, ಒಬ್ಬರ ಮನಸ್ಸನ್ನು ಗೆಲ್ಲುವುದು ಕಷ್ಟ.

ಪಂಚಾಂಗ : ಭಾನುವಾರ , 07-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ /ತಿಥಿ: ದ್ವಿತೀಯಾ / ನಕ್ಷತ್ರ: ಪುಷ್ಯ (ಪೂರ್ಣ) / ಯೋಗ: ಹರ್ಷಣ / ಕರಣ: ಬಾಲವ

ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಉದ್ಯೋಗ ಬದಲಾಯಿಸಲು ಯೋಚಿಸುವಿರಿ. ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ವೃಷಭ: ನಿರೀಕ್ಷೆಗಿಂತ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗಬಹುದು.
ಮಿಥುನ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.

ಕಟಕ: ಮಧ್ಯವರ್ತಿಗಳ ಸಹಾಯದಿಂದ ವಿವಾಹದ ವಿಷಯದಲ್ಲಿ ಅನುಕೂಲವಾಗಲಿದೆ.
ಸಿಂಹ: ಸುತ್ತಮುತ್ತಲಿನ ಜನರೊಂದಿಗೆ ಜಗಳ ವಾಡದಿರುವುದು ಸೂಕ್ತ.
ಕನ್ಯಾ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ.

ತುಲಾ: ಕುಟುಂಬ ಸದಸ್ಯ ರೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ವೃಶ್ಚಿಕ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಧಿ ಕ ಹಣ ಹೂಡಿಕೆ ಮಾಡುವಿರಿ. ದೂರ ಪ್ರಯಾಣ ಮಾಡುವಿರಿ.
ಧನುಸ್ಸು: ಬೆನ್ನು ನೋವು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.

ಮಕರ: ಅಧಿ ಕೃತ ಪ್ರಯಾಣ ಕೈಗೊಳ್ಳುವಿರಿ ಮತ್ತು ಅದರಿಂದ ಪ್ರಯೋಜನ ಸಿಗಲಿದೆ.
ಕುಂಭ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಮೀನ: ಶಿಕ್ಷಕರೊಂದಿಗೆ ಉತ್ತಮ ಸಂಬಂಧ ಕಾಪಾಡಿ ಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

RELATED ARTICLES

Latest News