ನಿತ್ಯ ನೀತಿ : ಎಷ್ಟೇ ಕಷ್ಟಪಟ್ಟು ಗಾಡಿ ಎಳೆದರೂ ಎತ್ತುಗಳಿಗೆ ಚಾಟಿ ಏಟು ತಪ್ಪಲ್ಲ. ಮರಗಳು ಎಷ್ಟೇ ಸಿಹಿ ಹಣ್ಣುಗಳನ್ನು ಕೊಟ್ಟರೂ ಕಲ್ಲೇಟು ತಪ್ಪಲ್ಲ. ಹಾಗೆಯೇ ನಾವು ಎಷ್ಟೇ ಒಳ್ಳೆಯ ಕೆಲಸ ಗಳನ್ನು ಮಾಡಿದರೂ ಟೀಕೆಗಳು ತಪ್ಪಲ್ಲ.
ಪಂಚಾಂಗ : ಗುರುವಾರ, 07-08-2025
ವಿಶ್ವಾವಸುನಾಮ ಸಂವತ್ಸರ / ದಕ್ಷಿಣಾಯನ / ಸೌರ ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಷಾಢ / ಯೋಗ: ವಿಷ್ಕಂಭ / ಕರಣ: ಗರಜೆ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.44
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಹಿತಶತ್ರುಗಳು ನಿಮ್ಮ ಹೆಸರನ್ನು ಹಾಳು ಮಾಡುವ ಪ್ರಯತ್ನ ಮಾಡಬಹುದು.
ವೃಷಭ: ಪತ್ನಿ ಹಾಗೂ ಮಕ್ಕಳ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಮಿಥುನ: ರಚನಾತ್ಮಕ ಕೆಲಸಗಳಲ್ಲಿ ವಿಶೇಷ ಆಸಕ್ತಿ ತಾಳುವಿರಿ. ಕುಟುಂಬದಲ್ಲಿ ಅಶಾಂತಿ ಉಂಟಾಗಲಿದೆ.
ಕಟಕ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಸಿಂಹ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾ ಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಲಿದೆ.
ತುಲಾ: ನಿಮ್ಮದಲ್ಲದ ತಪ್ಪಿಗೆ ಸಣ್ಣದೊಂದು ಶಿಕ್ಷೆ ಅನುಭವಿಸಬೇಕು. ಹಣದ ಕೊರತೆ ಇರುವುದಿಲ್ಲ.
ವೃಶ್ಚಿಕ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ ಮತ್ತು ಅದರಲ್ಲಿ ನೀವು ಯಶಸ್ಸು ಸಾ ಸುವಿರಿ. ಹಳೆ ಮಿತ್ರರ ಭೇಟಿ ಮಾಡುವಿರಿ.
ಧನುಸ್ಸು: ನಿರೀಕ್ಷಿತ ಮೂಲಗಳಿಂದ ಆದಾಯ ಬರ ಲಿದೆ.ಅಮೂಲ್ಯ ವಸ್ತುಗಳ ಖರೀದಿಗೆ ಉತ್ತಮ ದಿನ.
ಮಕರ: ಬಂದ ಅವಕಾಶ ಕೈ ತಪ್ಪುವುದು. ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ.
ಕುಂಭ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ಮೀನ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-08-2025)
- ವೋಟ್ ಚೋರಿ ಆರೋಪ : ಸಹಿ ಸಮೇತ ಮಾಹಿತಿ ನೀಡುವಂತೆ ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ
- ಒಳಮೀಸಲಾತಿ ಕುರಿತು ಆ.16ರಂದು ವಿಶೇಷ ಸಚಿವ ಸಂಪುಟ ಸಭೆ
- ಟ್ರಂಪ್ನಿಂದ ಆರ್ಥಿಕ ಬ್ಲ್ಯಾಕ್ಮೇಲ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ