Monday, May 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(08-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(08-05-2024)

ನಿತ್ಯ ನೀತಿ : ಗೆಲುವು ಪಡೆಯುವುದಕ್ಕಿಂತ ಕಠಿಣವಾದ ಕೆಲಸವಿಲ್ಲ , ಆದರೆ ಗೆಲುವಿನಿಂದ ಸಿಗುವ ಸಂತೋಷಕ್ಕಿಂತ ಮಿಗಿಲಿಲ್ಲ.
ಪಂಚಾಂಗ : ಬುಧವಾರ, 07-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಕೃಷ್ಣ ಪಕ್ಷ /
ತಿಥಿ: ದ್ವಾದಶಿ / ನಕ್ಷತ್ರ: ಭರಣಿ / ಯೋಗ: ಸೌಭಾಗ್ಯ / ಕರಣ: ಕಿಂಸ್ತುಘ್ನ

ಸೂರ್ಯೋದಯ : ಬೆ.05.56
ಸೂರ್ಯಾಸ್ತ : 06.36
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿಭವಿಷ್ಯ :
ಮೇಷ
: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ.
ವೃಶ್ಚಿಕ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

RELATED ARTICLES

Latest News