ನಿತ್ಯ ನೀತಿ : ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ.
ಪಂಚಾಂಗ : ಸೋಮವಾರ , 08-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ತೃತೀಯಾ (ಪೂರ್ಣ) / ನಕ್ಷತ್ರ: ಆಶ್ಲೇಷಾ / ಯೋಗ: ವಜ್ರ / ಕರಣ: ತೈತಿಲ
ಸೂರ್ಯೋದಯ – ಬೆ.05.59
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಉದ್ಯೋಗದಲ್ಲಿ ಹೆಚ್ಚು ಒತ್ತಡವಿರಲಿದೆ.
ವೃಷಭ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.
ಮಿಥುನ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ಕನ್ಯಾ: ಮಾತಿನಲ್ಲಿ ಹಿಡಿತವಿರಲಿ. ಶ್ರಮಕ್ಕೆ ತಕ್ಕ ಫಲ ದೊರೆಯುವುದು.
ತುಲಾ: ಅನವಶ್ಯಕ ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಧನುಸ್ಸು: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಮಕರ: ಬಟ್ಟೆ ವ್ಯಾಪಾರದಲ್ಲಿ ನಷ್ಟ. ಮಾತಿನಲ್ಲಿ ಹಿಡಿತವಿರಲಿ. ಸ್ವಜನರಿಂದ ತೊಂದರೆ.
ಕುಂಭ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.