ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-03-2022)

Social Share

ನಿತ್ಯನೀತಿ : ಬದುಕನ್ನು ಪ್ರೀತಿಸುತ್ತಾಸಾಗಿ ಬದುಕು ನಮ್ಮನ್ನು ಪ್ರೀತಿಸುತ್ತೆ.ಸೋಲನ್ನು ನಗುತ್ತಾ ಸ್ವಾಗತಿಸಿ. ಗೆಲುವು ನಮ್ಮನ್ನು ಸ್ವಾಗತಿಸುತ್ತೆ.
ಪಂಚಾಂಗ : ಬುಧವಾರ , 09-03-2022
ಪ್ಲವನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಶುಕ್ಲ  ಪಕ್ಷ / ತಿಥಿ: ಸಪ್ತಮಿ/ ನಕ್ಷತ್ರ: ಕೃತ್ತಿಕಾ/ ಮಳೆ ನಕ್ಷತ್ರ: ಶತಭಿಷ
* ಸೂರ್ಯೋದಯ : ಬೆ.06.31
* ಸೂರ್ಯಾಸ್ತ : 06.30
* ರಾಹುಕಾಲ : 12.00-1.30
* ಯಮಗಂಡ ಕಾಲ : 7.30-9.00
* ಗುಳಿಕ ಕಾಲ : 10.30-12.00
# ರಾಶಿಭವಿಷ್ಯ :
ಮೇಷ: ಜೀವನ ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ ಇರುತ್ತದೆ. ಸಮಸ್ಯೆಗಳು ನಿವಾರಣೆಯಾಗಲಿವೆ.
ವೃಷಭ: ಆರ್ಥಿಕ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ. ಯಾವುದೇ ತಪ್ಪು ನಿರ್ಧಾರಗಳನ್ನು ಕೈಗೊಳ್ಳದಿರಿ.
ಮಿಥುನ: ದೂರ ಪ್ರಯಾಣ ಮಾಡಿ ಆಯಾಸ ಮಾಡಿ ಕೊಳ್ಳದಿರಿ. ಹಣಕಾಸಿನ ಸಮಸ್ಯೆ ಪರಿಹಾರವಾಗಲಿದೆ.
ಕಟಕ: ಅಧಿಕೃತ ಪ್ರಯಾಣ ಕೈಗೊಳ್ಳುವುದರಿಂದ ಉದ್ದಿಮೆ ಕ್ಷೇತ್ರದಲ್ಲಿ ಹೆಚ್ಚು ಪ್ರಯೋಜನೆ ಸಿಗಲಿದೆ.
ಸಿಂಹ: ಉದ್ಯೋಗಿಗಳಿಗೆ ಕಚೇರಿಯಲ್ಲಿ ಮೇಲಧಿಕಾರಿಗಳ ಬೆಂಬಲ ದೊರೆಯಲಿದೆ.
ಕನ್ಯಾ: ಪ್ರೀತಿಪಾತ್ರರ ನಡುವೆ ವೈಮನಸ್ಸು ಉಂಟಾಗಬಹುದು. ಸುಲಭವಾಗಿ ಮುಗಿಸುವ ಕಾರ್ಯಗಳಲ್ಲಿ ಅಡೆತಡೆಗಳು ಉಂಟಾಗಬಹುದು.
ತುಲಾ: ವೃತ್ತಿಜೀವನದಲ್ಲಿ ಕೆಲವು ಸಂದಿಗ್ಧ ಪರಿಸ್ಥಿತಿಗಳು ಎದುರಾಗಲಿವೆ. ಆರೋಗ್ಯ ಸಮಸ್ಯೆ ಕಾಡಲಿದೆ.
ವೃಶ್ಚಿಕ: ಆರ್ಥಿಕ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿರಿ. ನಿರೀಕ್ಷೆಗಿಂತ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗಬಹುದು.
ಧನುಸ್ಸು: ಶಿಕ್ಷಕರೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವುದರಿಂದ ಮನಸ್ಸಿಗೆ ಶಾಂತಿ-ನೆಮ್ಮದಿ ದೊರೆಯಲಿದೆ.
ಮಕರ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಕುಟುಂಬ ಸದಸ್ಯರೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಕುಂಭ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಮೀನ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.

Articles You Might Like

Share This Article