Friday, October 11, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-09-2024)

Horoscope

ನಿತ್ಯ ನೀತಿ : ಮನೆ ಕಟ್ಟಲು ಹಣ ಬೇಕು, ಮನಸ್ಸು ಕಟ್ಟಲು ಗುಣ ಬೇಕು.ಹಣದಿಂದ ಕಟ್ಟಿದ ಮನೆಯಲ್ಲಿ ಎಲ್ಲರೂ ಇರುತ್ತಾರೆ. ಆದರೆ, ಗುಣದಿಂದ ಕಟ್ಟಿದ ಮನೆಯಲ್ಲಿ ಯೋಗ್ಯರಷ್ಟೇ ನೆಲೆಸುತ್ತಾರೆ.

ಪಂಚಾಂಗ : ಮಂಗಳವಾರ, 10-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಅನುರಾಧಾ / ಯೋಗ: ವಿಷ್ಕಂಭ / ಕರಣ: ಗರಜ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.24
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ: ಕಚೇರಿ ಕೆಲಸವನ್ನು ನಿಷ್ಠೆಯಿಂದ ಮಾಡು ವಿರಿ. ಅನ್ಯರಿಗೆ ಉಪಕಾರ ಮಾಡಲು ಮುಂದಾಗಿ.
ವೃಷಭ: ಉನ್ನತ ಶಿಕ್ಷಣದಲ್ಲಿ ಯಶಸ್ಸು ಸಾಧಿಸು ವಿರಿ. ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡುವಿರಿ.
ಮಿಥುನ: ಮೋಜು-ಮಸ್ತಿಯಲ್ಲಿ ತೊಡಗುವಿರಿ.

ಕಟಕ: ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ. ಮಕ್ಕಳಿಂದ ಸಂತಸ ಸಿಗಲಿದೆ.
ಸಿಂಹ: ಪತ್ನಿ ಸಹಕಾರದಿಂದ ಕೆಲಸ-ಕಾರ್ಯಗಳು ಸುಗಮವಾಗಿ ನೆರವೇರಲಿವೆ.
ಕನ್ಯಾ: ಅಂದುಕೊಂಡಿದ್ದ ಕೆಲಸಗಳು ಉತ್ತಮವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.

ತುಲಾ: ಹಣದ ಕೊರತೆ ಇರುವುದಿಲ್ಲ. ಕಠಿಣ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ.
ವೃಶ್ಚಿಕ: ಉಪನ್ಯಾಸಕ ವೃತ್ತಿಯವರಿಗೆ ನಷ್ಟ.
ಧನುಸ್ಸು: ಹೊಸ ಜನರ ಸಂಪರ್ಕ ಮಾಡಿಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳಿ.

ಮಕರ: ಕಷ್ಟದ ಪರಿಸ್ಥಿತಿಯಲ್ಲಿ ಜನಬಲದ ಕೊರತೆಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕುಂಭ: ಅಜೀರ್ಣ ಮತ್ತು ಉದರಕ್ಕೆ ಸಂಬಂಧಿಸಿದ ಅನಾರೋಗ್ಯ ಎದುರಾಗಲಿದೆ.
ಮೀನ: ಮಹಿಳೆಯರಿಗೆ ಆಭರಣ ಸಿಗಲಿದೆ. ಬಂಧುಗಳ ಸಹಾಯ-ಸಹಕಾರ ದೊರೆಯುವುದು.

RELATED ARTICLES

Latest News