Friday, October 18, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-10-2024)

Today's Horoscope

ನಿತ್ಯ ನೀತಿ : ಕೆಲಸ ಚಿಕ್ಕದಾಗಿರಲಿ, ದೊಡ್ಡದಾಗಿರಲಿ ಆರಂಭದಿಂದಲೂ ಶ್ರದ್ಧೆಯಿಂದ ಸಂಪೂರ್ಣ ಶ್ರಮ ವಹಿಸಿ ಮಾಡಬೇಕು.

ಪಂಚಾಂಗ : ಗುರುವಾರ, 10-10-2024

ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ/ ಶರದ್ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪೂರ್ವಾಷಾಢ / ಯೋಗ : ಅತಿಗಂಡ / ಕರಣ: ವಿಷ್ಠಿ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.04
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ಸಮಾಜದಲ್ಲಿ ಗೌರವ ಸಿಗಲಿದೆ. ಅಮೂಲ್ಯ ವಸ್ತುಗಳನ್ನು ಖರೀದಿಸುವುದರಿಂದ ಸಂತಸ ಪಡುವಿರಿ.
ವೃಷಭ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಮಿಥುನ: ನಂಬಿದ ಜನರಿಂದ ಮೋಸ ಹೋಗುವ ಸಾಧ್ಯತೆಗಳು ಹೆಚ್ಚಾಗಿವೆ. ಎಚ್ಚರಿಕೆಯಿಂದಿರಿ.

ಕಟಕ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣುವುದು. ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ.
ಸಿಂಹ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ. ವಾಹನ ಚಾಲಕರು ಎಚ್ಚರಿಕೆಯಿಂದಿರಿ.
ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.

ತುಲಾ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಉನ್ನತ ಅಧಿಕಾರಿ ಗಳೊಂದಿಗೆ ಕಲಹ ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ಮಕರ: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ. ಬಂಧುಗಳ ನಡುವೆ ವಿರಸ ಉಂಟಾಗಲಿದೆ.
ಕುಂಭ: ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.
ಮೀನ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.

RELATED ARTICLES

Latest News