ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-02-2022)

Social Share

ನಿತ್ಯ ನೀತಿ : ಪರರನ್ನು ಗೌರವಿಸುವುದನ್ನು ಕಲಿಯದಿದ್ದರೆ ನಾವೆಂದೂ ದೊಡ್ಡವರಾಗುವುದಿಲ್ಲ.

# ಪಂಚಾಂಗ : ಶುಕ್ರವಾರ , 11-02-2022
ಪ್ಲವನಾಮ ಸಂವತ್ಸರ | ಉತ್ತರಾಯಣ | ಶಿಶಿರ ಋತು | ಮಾಘ  ಮಾಸ | ಶುಕ್ಲ ಪಕ್ಷ | ತಿಥಿ: ದಶಮಿ| ನಕ್ಷತ್ರ: ಮೃಗಶಿರಾ| ಮಳೆ ನಕ್ಷತ್ರ: ಧನಿಷ್ಠ
* ಸೂರ್ಯೋದಯ : ಬೆ.06.44
* ಸೂರ್ಯಾಸ್ತ : 06.24
* ರಾಹುಕಾಲ : 1.30-12.00
* ಯಮಗಂಡ ಕಾಲ : 3.00-4.30
* ಗುಳಿಕ ಕಾಲ : 7.30-09.00
# ರಾಶಿಭವಿಷ್ಯ 
ಮೇಷ: ನೀವು ಮಾಡುವ ಕೆಲಸಕ್ಕೆ ಹಿರಿಯರು ಅಥವಾ ಒಡಹುಟ್ಟಿದವರ ಸಹಾಯ ಬೇಕಾಗುತ್ತದೆ.
ವೃಷಭ: ಆರ್ಥಿಕ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿರಿ. ನಿರೀಕ್ಷೆಗಿಂತ ಹೆಚ್ಚು ಖರ್ಚು ಮಾಡಬೇಕಾದ ಸಂದರ್ಭಗಳು ಎದುರಾಗಬಹುದು.
ಮಿಥುನ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.
ಕಟಕ: ಅಧ್ಯಯನದ ಅಭ್ಯಾಸ ಮಾಡುವಾಗ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಮಾನಸಿಕ ಒತ್ತಡ ತೊಡೆದುಹಾಕಲು ಪ್ರಯತ್ನಿಸಿ. ಕುಟುಂಬ ಸದಸ್ಯ ರೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಕನ್ಯಾ: ಸುತ್ತಮುತ್ತಲಿನ ಜನರೊಂದಿಗೆ ಜಗಳ ವಾಡದಿರುವುದು ಸೂಕ್ತ.
ತುಲಾ: ಶಿಕ್ಷಕರೊಂದಿಗೆ ಉತ್ತಮ ಸಂಬಂಧ ಕಾಪಾಡಿಕೊಳ್ಳುವುದರಿಂದ ಮನಸ್ಸಿಗೆ ಶಾಂತಿ-ನೆಮ್ಮದಿ ದೊರೆಯಲಿದೆ.
ವೃಶ್ಚಿಕ: ಆಸ್ತಿ, ಅಪಾರ್ಟ್‍ಮೆಂಟ್ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.
ಧನುಸ್ಸು: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಮಕರ: ಅಧಿಕೃತ ಪ್ರಯಾಣ ್ನಕೈಗೊಳ್ಳುವಿರಿ ಮತ್ತು ಅದರಿಂದ ಪ್ರಯೋಜನ ಸಿಗಲಿದೆ.
ಕುಂಭ: ಬೆನ್ನು ನೋವು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ನೀವು ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮೀನ: ಉದ್ಯೋಗದಲ್ಲಿ ಬಡ್ತಿ ಮತ್ತು ವೇತನ ಹೆಚ್ಚಳವಾಗುವ ಅವಕಾಶಗಳಿವೆ.

Articles You Might Like

Share This Article