Sunday, May 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(11-05-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(11-05-2024)

ನಿತ್ಯ ನೀತಿ : ನಾಟಕೀಯವಾದ ಭರವಸೆಗಳಿಗಿಂತ ಪ್ರಾಮಾಣಿಕವಾದ ತಿರಸ್ಕಾರವೇ ಉತ್ತಮ.

ಪಂಚಾಂಗ :ಶನಿವಾರ, 11-05-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ವೈಶಾಖ ಮಾಸ / ಶುಕ್ಲ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮೃಗಶಿರಾ / ಯೋಗ: ಸುಕರ್ಮಾ / ಕರಣ: ವಣಿಜ್‌

ಸೂರ್ಯೋದಯ : ಬೆ.05.55
ಸೂರ್ಯಾಸ್ತ : 06.37
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿಭವಿಷ್ಯ
ಮೇಷ
: ಅಧ್ಯಯನದ ಅಭ್ಯಾಸ ಮಾಡುವಾಗ ಕೆಲವು ಸವಾಲುಗಳನ್ನು ಎದುರಿಸಬೇಕಾಗಬಹುದು.
ವೃಷಭ: ಸ್ತ್ರೀಯರಿಂದ ಅಪವಾದಕ್ಕೆ ಗುರಿಯಾಗುವ ಸಾಧ್ಯತೆಗಳಿವೆ. ಎಚ್ಚರಿಕೆಯಿಂದಿರಿ.
ಮಿಥುನ: ರಿಯಲ್‌ ಎಸ್ಟೇಟ್‌ಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

ಕಟಕ: ಧರ್ಮ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ.
ಸಿಂಹ: ಆದಾಯ ಹೆಚ್ಚಾದರೂ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವುದು ಅನಿವಾರ್ಯ.
ಕನ್ಯಾ: ಸಂಗಾತಿಯೊಂದಿಗೆ ಚರ್ಚಿಸಿ ಹಣಕಾಸಿನ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಿ.

ತುಲಾ: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಉತ್ತಮ.
ವೃಶ್ಚಿಕ: ವೃತ್ತಿ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಪ್ರಯತ್ನಿಸಿ.
ಧನುಸ್ಸು: ಆರ್ಥಿಕ ಏರುಪೇರಿನಿಂದಾಗಿ ಕುಟುಂಬ ದಲ್ಲಿ ಅಹಿತಕರ ವಾತಾವರಣ ಉಂಟಾಗಲಿದೆ.

ಮಕರ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಕುಂಭ: ನಿರೀಕ್ಷಿಸಿದಂತೆ ಅಧಿ ಕ ಧನಲಾಭ ದೊರೆಯ ಲಿದೆ. ಜನಮನ್ನಣೆ ಗಳಿಸುವಿರಿ.
ಮೀನ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.

RELATED ARTICLES

Latest News