Wednesday, November 12, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-11-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-11-2025)

Today's Horoscope

ನಿತ್ಯ ನೀತಿ : ಕೆಲವರು ಕೇಳುವ ಅರ್ಥವಿಲ್ಲದ ಚಡಪಡಿಕೆಯ ಪ್ರಶ್ನೆಗಳಿಗೆ ಉತ್ತರ ಕೊಡಬಾರದು. ಆದರಿಂದ ನಿಮ್ಮ ವ್ಯಕ್ತಿತ್ವ ಹಾಳಾಗುತ್ತದೆ.

ಪಂಚಾಂಗ : ಬುಧವಾರ, 12-11-2025
ಶೋಭಕೃತ್‌ನಾಮ ಸಂವತ್ಸರ / ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ:ಕಾರ್ತಿಕ /ಪಕ್ಷ: ಕೃಷ್ಣ / ತಿಥಿ: ಅಷ್ಟಮಿ / ನಕ್ಷತ್ರ: ಆಶ್ಲೇಷಾ / ಯೋಗ: ಶುಕ್ಲ / ಕರಣ: ಬಾಲವ

ಸೂರ್ಯೋದಯ – ಬೆ.06.17
ಸೂರ್ಯಾಸ್ತ – 5.51
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಮಿತ್ರರಲ್ಲಿ ಕಂಡುಬರುವ ಭಿನ್ನಾಭಿಪ್ರಾಯ ಹೋಗಲಾಡಿಸಲು ಯತ್ನಿಸುವಿರಿ.
ವೃಷಭ: ವ್ಯವಹಾರ ಸಂಬಂ ಮಾತುಗಳು ಇಂದು ಫಲ ನೀಡಲಿವೆ. ಆರೋಗ್ಯದ ಕಡೆ ಗಮನ ಹರಿಸಿ.
ಮಿಥುನ: ಬಹಳ ದಿನಗಳ ಕನಸನ್ನು ನನಸು ಮಾಡುವ ಅವಕಾಶಗಳು ಲಭಿಸಲಿವೆ.

ಕಟಕ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಸಿಂಹ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಕನ್ಯಾ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.

ತುಲಾ: ನೀವು ಯೋಚಿಸಿದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.
ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.
ಧನುಸ್ಸು: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.

ಮಕರ: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಕುಂಭ: ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸಿ. ಅನಗತ್ಯ ಚರ್ಚೆ ಬೇಡ.
ಮೀನ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.

RELATED ARTICLES

Latest News