ನಿತ್ಯ ನೀತಿ : ಸ್ಥಿತಿಯಲ್ಲಿ ನಿಮಗಿಂತ ಮೇಲೆ ಅಥವಾ ಕೆಳಗಿರುವ ಜನರೊಂದಿಗೆ ಎಂದಿಗೂ ಸ್ನೇಹ ಬೆಳೆಸಬೇಡಿ.ಅಂತಹ ಸ್ನೇಹ ನಿಮಗೆ ಎಂದಿಗೂ ಸಂತೋಷ ನೀಡುವುದಿಲ್ಲ.
ಪಂಚಾಂಗ : ಗುರುವಾರ, 13-06-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಶುಕ್ಲ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವಜ್ರ / ಕರಣ: ಗರಜೆ
ಸೂರ್ಯೋದಯ – ಬೆ.05.53
ಸೂರ್ಯಾಸ್ತ – 06.46
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಸ್ವಯಂಕೃತ ಅಪರಾಧಗಳಿಂದ ತೊಂದರೆಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.
ವೃಷಭ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಮಿಥುನ: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು.
ಕಟಕ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಉದ್ಯೋಗದಲ್ಲಿ ತೊಂದರೆಗಳು ಕಾಣಿಸಿ ಕೊಳ್ಳಲಿವೆ. ವ್ಯಾಪಾರಿಗಳಿಗೆ ಅಲ್ಪ ಲಾಭ.
ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.
ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.