ನಿತ್ಯ ನೀತಿ : ಹಾಗಲಕಾಯಿ ಕೆಲವರ ಆರೋಗ್ಯಕ್ಕೆ ಸಿಹಿ, ಕೆಲವರಿಗೆ ಕಹಿ. ಹಾಗೇ ಒಬ್ಬ ವ್ಯಕ್ತಿ ಎಲ್ಲರಿಗೂ ಒಳ್ಳೆಯವನಾಗಿರೋಕೆ ಸಾಧ್ಯವಿಲ್ಲ.
ಪಂಚಾಂಗ : ಬುಧವಾರ, 13-11-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಶುಕ್ಲ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ರೇವತಿ / ಯೋಗ: ವಜ್ರ / ಕರಣ: ಕೌಲವ
ಸೂರ್ಯೋದಯ – ಬೆ.06.18
ಸೂರ್ಯಾಸ್ತ – 05.50
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ವೃಷಭ: ಮಿತ್ರರಿಂದ ಮನಸ್ಸಿಗೆ ನೋವಾಗುವಂತಹ ಮಾತುಗಳನ್ನು ಕೇಳಬೇಕಾಗಬಹುದು.
ಮಿಥುನ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ.
ಕಟಕ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮ್ಮದಿ ಹಾಳಾಗುವ ಸಾಧ್ಯತೆ ಇದೆ.
ಸಿಂಹ: ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿ ಯಿಂದ ಸಹಾಯ ಸಿಗಲಿದೆ.
ಕನ್ಯಾ: ಹಳೆ ಮಿತ್ರರನ್ನು ಭೇಟಿ ಮಾಡುವಿರಿ. ಅತಿಯಾದ ಆತ್ಮವಿಶ್ವಾಸ ಬೇಡ.
ತುಲಾ: ನಿಮ್ಮ ನಡವಳಿಕೆ ಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ವೃಶ್ಚಿಕ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಧನುಸ್ಸು: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ಸ್ನೇಹಿತರ ಬೆಂಬಲ ಸಿಗಲಿದೆ.
ಮಕರ: ಧಾರ್ಮಿಕ ಕಾರ್ಯಗಳಲ್ಲಿ ತೊಡಗಬೇಕೆಂಬ ಆಲೋಚನೆಗಳು ಬರಲಿವೆ.
ಕುಂಭ: ಹಿತಶತ್ರುಗಳ ಒಳಸಂಚು ನಿಮ್ಮ ಗಮನಕ್ಕೆ ಬರಲಿದ್ದು, ಧೈರ್ಯದಿಂದ ಎದುರಿಸಿ.
ಮೀನ: ಅನವಶ್ಯಕ ವಿಷಯಗಳಿಗೆ ನಿಮ್ಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.