ನಿತ್ಯ ನೀತಿ : ಮೂರ್ಖ ತಾನು ಜಾಣ ಎಂದು ತಿಳಿದಿರುತ್ತಾನೆ. ಆದರೆ, ಜಾಣನಿಗೆ ತನ್ನ ಮೂರ್ಖತನದ ಅರಿವು ಇರುತ್ತದೆ.
ಪಂಚಾಂಗ : ಭಾನುವಾರ, 14-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಆರಿದ್ರಾ / ಯೋಗ: ಅತಿಗಂಡ / ಕರಣ: ಗರಜೆ
ಸೂರ್ಯೋದಯ : ಬೆ.06.08
ಸೂರ್ಯಾಸ್ತ : 06.32
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30
ರಾಶಿಭವಿಷ್ಯ :
ಮೇಷ: ಪಾಲುದಾರಿಕೆಯಲ್ಲಿ ಲಾಭ ಸಿಗಲಿದೆ. ಉದ್ಯೋಗ ನಿಮಿತ್ತ ಪ್ರಯಾಣ ಮಾಡುವಿರಿ.
ವೃಷಭ: ಅಪರೂಪದ ಅತಿಥಿಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
ಮಿಥುನ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.
ಕಟಕ: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸದಾ ಸಿಗಲಿದೆ.
ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.
ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.
ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ತರಕಾರಿ ವ್ಯಾಪಾರಿ ಗಳಿಗೆ ಅಲ್ಪ ಪ್ರಮಾಣದ ಲಾಭ.
ಧನುಸ್ಸು: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಮಕರ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಕುಂಭ: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ. ಬಂಧುಗಳ ನಡುವೆ ವಿರಸ ಉಂಟಾಗಲಿದೆ.
ಮೀನ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ. ವಾಹನ ಚಾಲಕರು ಎಚ್ಚರಿಕೆಯಿಂದಿರಿ.