ಇಂದಿನ ಪಂಚಾಂಗ ಮತ್ತು ರಾಶಿ ಭವಿಷ್ಯ (14-08-2022)

Social Share

ನಿತ್ಯ ನೀತಿ : ಮೌನ ಕಲಿಸುವಷ್ಟು ಪಾಠ, ಮೌನ ಕೊಡುವಷ್ಟು ನೆಮ್ಮದಿ, ಮೌನದಿಂದ ಬರುವಷ್ಟು ತಾಳ್ಮೆ ಯಾವುದರಲ್ಲೂ ಬರುವುದಿಲ್ಲ.

ಪಂಚಾಂಗ : ಭಾನುವಾರ, 14-08-2022

ಶುಭಕೃತ್ ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪೂರ್ವಾಷಾಢ / ಮಳೆ ನಕ್ಷತ್ರ: ಆಶ್ಲೇಷ
ಸೂರ್ಯೋದಯ : ಬೆ.06.07
ಸೂರ್ಯಾಸ್ತ : 06.41
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ಇಂದಿನ ರಾಶಿ ಭವಿಷ್ಯ

ಮೇಷ: ಮಕ್ಕಳ ಪ್ರಗತಿಯಲ್ಲಿ ಮಿಶ್ರ ಪ್ರತಿಫಲ ಕಾಣ ಬೇಕಾಗುತ್ತದೆ. ಶ್ರಮ ವಹಿಸಿ ಕೆಲಸ ಮಾಡಿ.
ವೃಷಭ: ಬೇರೊಬ್ಬರ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ತಪ್ಪಿಸುವುದು ಒಳಿತು.
ಮಿಥುನ: ತಂದೆಯವರ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸುತ್ತದೆ. ಶಾಂತವಾಗಿರುವುದು ಒಳಿತು.

ಕಟಕ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಸಿಂಹ: ನಿಮ್ಮ ಜನಪ್ರಿಯತೆ ಉತ್ತುಂಗದಲ್ಲಿರುತ್ತದೆ ಮತ್ತು ಇತರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುವಿರಿ.
ಕನ್ಯಾ: ಸಾಧ್ಯವಾದಷ್ಟೂ ರಾತ್ರಿ ಪ್ರಯಾಣ ಮಾಡ ಬೇಡಿ.

ತುಲಾ: ಕುಟುಂಬದ ಹಿರಿಯರಿಗೆ ಪ್ರಾಮುಖ್ಯತೆ ನೀಡಿ. ಹೊಸ ವ್ಯವಹಾರ ಪ್ರಾರಂಭಿಸಿಲು ಉತ್ತಮ ದಿನ.
ವೃಶ್ಚಿಕ: ವಧು ಅಥವಾ ವರನನ್ನು ಹುಡುಕುತ್ತಿದ್ದಲ್ಲಿ ಸೂಕ್ತ ಸಂಬಂಧ ದೊರೆಯುವುದು ಕಷ್ಟಸಾಧ್ಯವಾಗಲಿದೆ.
ಧನುಸ್ಸು: ಕೌಟುಂಬಿಕ ಮತ್ತು ವೈವಾಹಿಕ ಜೀವನ ಬಹಳ ಆಹ್ಲಾದಕರವಾಗಿರುತ್ತದೆ.

ಮಕರ: ಕೆಟ್ಟ ಆಲೋಚನೆ ಮಾಡುವುದನ್ನು ತಪ್ಪಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಕುಂಭ: ಯಾರ ಮೇಲೂ ವೈಯಕ್ತಿಕವಾಗಿ ದ್ವೇಷ ಸಾಸಲು ಹೋಗದಿರಿ. ಕಷ್ಟ ಎದುರಿಸಬೇಕಾಗುತ್ತದೆ.
ಮೀನ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನ ದಲ್ಲಿ ಯಶಸ್ವಿಯಾಗುತ್ತಾರೆ.

Articles You Might Like

Share This Article