Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-07-2024)

ನಿತ್ಯ ನೀತಿ : ಎಲ್ಲವೂ ಇದ್ದು ಶಕ್ತಿಶಾಲಿಗಳೆನ್ನಿಸಿಕೊಳ್ಳುವುದು ದೊಡ್ಡದಲ್ಲ. ಎಲ್ಲವನ್ನೂ ಕಳೆದುಕೊಂಡಾಗ ತೋರುವುದೇ ನಿಜವಾದ ಶಕ್ತಿ.

ಪಂಚಾಂಗ : ಸೋಮವಾರ , 15-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಶುಕ್ಲ ಪಕ್ಷ / ತಿಥಿ: ನವಮಿ / ನಕ್ಷತ್ರ: ಸ್ವಾತಿ / ಯೋಗ: ಸಿದ್ಧ / ಕರಣ: ಬಾಲವ

ಸೂರ್ಯೋದಯ – ಬೆ.06.01
ಸೂರ್ಯಾಸ್ತ – 06.50
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.
ವೃಷಭ: ಸ್ಥಗಿತ ಕಾರ್ಯಕ್ಕೆ ಮರು ಚಾಲನೆ ಸಿಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ.
ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.

ಕಟಕ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಸಿಂಹ: ಸುಲಭವಾಗಿ ಜೀರ್ಣ ವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.

ಕನ್ಯಾ: ಕೊಟ್ಟ ಹಣ ತಿರುಗಿ ಬರಲಿದೆ. ಜವಾಬ್ದಾರಿ ವಹಿಸಿ ಕೆಲಸ ಮಾಡಿ.
ತುಲಾ: ಹಿರಿಯ ಅಧಿ ಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.

ಧನುಸ್ಸು: ಹಣಕಾಸಿನ ವಿಷಯದಲ್ಲಿ ಸ್ನೇಹಿತರೊಂದಿಗೆ ಚಕಮಕಿ ನಡೆಸುವಿರಿ.
ಮಕರ: ತಂದೆಯ ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಜಾಗ್ರತೆ ವಹಿಸಬೇಕು.
ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ಬಂಧುಗಳಲ್ಲಿ ವಿಶ್ವಾಸ, ಸಂಬಂಧ ಬೆಳೆಸಿಕೊಳ್ಳುವತ್ತ ಪ್ರಯತ್ನಿಸಿ.

RELATED ARTICLES

Latest News